ಡಿ.ದೇವರಾಜ ಅರಸು 109ನೇ ಜನ್ಮ ದಿನಾಚರಣೆ…
ಸೌಹಾರ್ದಯುತ ಸಮಾಜ ಕಟ್ಟುವಲ್ಲಿ ಅರಸುರವರ ಪಾತ್ರ ದೊಡ್ಡದು..
ಸಾಮಾಜಿಕ ಕ್ರಾಂತಿಯ ಹರಿಕಾರ ಅರಸುರವರ ಚಿಂತನೆ ಪ್ರಶಕ್ತ ಸಮಾಜಕ್ಕೆ ಅತ್ಯವಶ್ಯಕ..
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್..
ಬೆಳಗಾವಿ : ಆ.20:
ಹಿಂದುಳಿದ ವರ್ಗಗಳಿಗೆ ಒಂದು ದಿಸೆಯನ್ನು ನೀಡಿದಂತಹ ಮಹಾನ ಚೇತನರು ಹಾಗೂ ಹಿಂದುಳಿದ ವರ್ಗದ ಜನರಿಗೆ ಗೌರವದ ಬದುಕನ್ನು ಕಟ್ಟಿಕೊಳ್ಳಲು ಪ್ರಥಮವಾಗಿ ಪ್ರಯತ್ನಿಸಿದ, ಸಮಾಜದಲ್ಲಿ ಎಲ್ಲರೂ ಸಮಾನರೆಂದು, ಎಲ್ಲರ ಏಳಿಗೆಗಾಗಿ ಹೊಸ ಸಾಮಾಜಿಕ ಕ್ರಾಂತಿಯ ಯೋಜನೆಗಳನ್ನು ತಂದ ಆದರ್ಶ ರಾಜಕಾರಣಿ ದಿ ದೇವರಾಜ ಅರಸು ಅವರನ್ನು ಪ್ರತಿ ಕ್ಷಣ ನೆನಸಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮಹಮ್ಮದ್ ರೋಷನ್ ಅವರು ನುಡಿದಿದ್ದಾರೆ..

ನಗರದ ಜಿಲ್ಲಾ ಕಚೇರಿ ಎದುರಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಮಹಾನಗರ ಪಾಲಖೆ ಸಂಯುಕ್ತಾಶ್ರಯದಲ್ಲಿ ಜರುಗಿದ ಡಿ.ದೇವರಾಜ ಅರಸು ರವರ 109ನೇ ಜನ್ಮ ದಿನಾಚರಣೆಯ ಮೆರವಣಿಗೆಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಂತರ ಕುಮಾರ ಗಂಧರ್ವ ರಂಗ ಮಂದಿರದ ವೇದಿಕೆ ಕಾರ್ಯಕ್ರಮದಲ್ಲಿ ಮಾತನಾಡಿದ ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಡಿ.ದೇವರಾಜ ಅರಸು ಅವರು ತಮ್ಮ ಮುಖ್ಯಮಂತ್ರಿಗಳ ಆಡಳಿತಾವಧಿಯಲ್ಲಿ ಶೋಷಿತರನ್ನು ಮುಖ್ಯವಾಹಿನಿಗೆ ತರುವಲ್ಲಿ ಎಲ್ಲ ವಿರೋಧಗಳನ್ನು ಮೀರಿ ಪ್ರಯತ್ನಿಸಿ ತಮ್ಮ ಛಾಪನ್ನು ಮೂಡಿಸಿದ್ದರು ಎಂದರು.
ಅರಸುರವರು ಸಮಾಜದ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಅನೇಕ ಕ್ರಾಂತಿಕಾರಿಕ ಬದಲಾವಣೆಗಳನ್ನು ತಂದರು. ಜೀತ ಪದ್ಧತಿ ನಿರ್ಮೂಲನೆ, ಮಲ ಹೊರುವ ಪದ್ಧತಿಯಂತಹ ಅನೇಕ ಅನಿಷ್ಠ ಪದ್ಧತಿಗಳನ್ನು ತೊಡದು ಹಾಕಲು ಪ್ರಮುಖ ನಿರ್ಣಯಗಳನ್ನು ತೆಗೆದುಕೊಂಡಂತಹ ಮಹಾನುಭಾವರಾಗಿದ್ದರು.

ಇಂದು ಸರಕಾರಗಳು ಶೋಷಿತರ ಅಭ್ಯುಧ್ಯಯಕ್ಕಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿವೆ. ಈ ಯೋಜನೆಗಳು ಅರ್ಹರಿಗೆ ತಲುಪವಂತಹ ಕಾರ್ಯವಾಗಬೇಕಾಗಿದೆ. ಈ ನಿಟ್ಟಿನಲ್ಲಿ ಹಿಂದುಳಿದ ವರ್ಗಗಳ ಸಮುದಾಯಗಳು ಜಾಗೃತವಾಗಿ ಸರಕಾರದ ಯೋಜನೆಗಳ ಸೌಲಭ್ಯಗಳನ್ನು ಪಡೆದುಕೊಂಡು ಆರ್ಥಿಕ, ಶೈಕ್ಷಣಿಕವಾಗಿ ಸಮಾಜದ ಮುನ್ನೆಲೆಗೆ ಬರುವಂತೆ ಕರೇ ನೀಡಿದರು.
ಅಧಿಕಾರಿದಲ್ಲಿರುವಂತಹವರು ಸರಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸುವದರ ಮೂಲಕ ಸಮಾಜದಲ್ಲಿ ಸಮಾನತೆ ತರಬಹುದಾಗಿದೆ ಎಂದು ಅಭಿಪ್ರಾಯ ಪಟ್ಟರು.
ಡಿ.ದೇವರಾಜ ಅರಸು ಅವರ 109ನೇ ಜನ್ಮ ದಿನಾಚರಣೆಯ ಪ್ರಯುಕ್ತ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರ ಸಂದೇಶವನ್ನು ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ ಅವರು ವಾಚಿಸಿದರು.

ಜಿ.ಪಂ.ಉಪಕಾರ್ಯದರ್ಶಿ ಬಸವರಾಜ ಹೆಗನಾಯಕ ಮಾತನಾಡಿ ರಾಜ್ಯದಲ್ಲಿನ ಹಿಂದುಳಿದ ವರ್ಗಗಳ ಇಲಾಖೆಯಡಿಯಲ್ಲಿನ ವಸತಿ ನಿಲಯಗಳು ಉತ್ತಮವಾಗಿವೆ. ಇಲ್ಲಿ ವ್ಯಾಸಂಗ ಮಾಡುತ್ತಿರುವ ವಿಧ್ಯಾರ್ಥಿಗಳು ಒಳ್ಳೆಯ ಶಿಕ್ಷಣ ಪಡೆದು ಕೊಳ್ಳುವದರ ಮೂಲಕ ದೇಶದ ಉನ್ನತ ಸ್ಥಾನಮಾನ ಪಡೆದುಕೊಳ್ಳುವಂತೆ ತಮ್ಮಬಾಲ್ಯದ ನೆನಪುಗಳನ್ನು ಮೆಲಕು ಹಾಕುತ್ತಾ ವಿಧ್ಯಾರ್ಥಗಳಿಗೆ ಪ್ರೋತ್ಸಾಹಿಸಿದರು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಯಕ್ಕುಂಡಿಯ ಸರಕಾರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಡಾ.ವಾಯ್.ಎಮ್ ಯಾಕ್ಕೋಳಿ ಅವರು ಡಿ.ದೇವರಾಜ ಅರಸು ರವರ ಜೀವನ ಸಾಧನೆ ಕುರಿತು ಮಾತನಾಡುತ್ತಾ ಡಿ.ದೇವರಾಜ ಅರಸು ಅವರು ತಮ್ಮ ಎಂಟು ವರ್ಷಗಳಮುಖ್ಯ ಮಂತ್ರಿಗಳ ಆಡಳಿತಾವದಿಯಲ್ಲಿ ಬಡವರು, ಶೋಷಿತರು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಶ್ರಮಿಸಿದ್ದರು.
ಸಮಾಜದಲ್ಲಿನ ಹಿಂದುಳಿದ ವರ್ಗದವರು ಸಮಾಜದ ಮುಖ್ಯವಾಹಿನಿಗೆ ಬರಬೇಕಾದರೆ ಶೈಕ್ಷಣಿಕವಾಗಿ ಮುಂದೆ ಬರುವದು ಅವಶ್ಯಕ ಎಂದು ಮನಗಂಡ ಅವರು ಹಿಂದುಳಿದ ವರ್ಗದವರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯನ್ನು ಜಾರಿಗೊಳಿಸಿದರು.

ಡಿ.ದೇವತಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ತಮ್ಮ ಜೀವನ ಮುಡಿಪಾಗಿಡುವದರ ಜೊತೆಗೆ ತಮ್ಮ ಆಡಳಿತಾವಧಿಯಲ್ಲಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಿದ್ದು ಇಂದು ನಾವೆಲ್ಲ ಅವರನ್ನು ಮಾದರಿಯಾಗಿಟ್ಟುಕೊಳ್ಳಬೇಕು ಎಂದರು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಶಿವಪ್ರಿಯಾ ಕಡೇಚೂರ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂದಗಡದ ಸಂಗೋಳ್ಳಿ ರಾಯಣ್ಣ ಸ್ಮಾರಕ ಶಾಲೆಯ ವಿಧ್ಯಾರ್ಥಿಗಳು ನಾಡಗೀತೆ ಹಾಗೂ ಪ್ರಾರ್ಥನೆ ಪ್ರಸ್ತುತಿಸಿದರು.
ಸನ್ಮಾನ: ಡಿದೇವರಾಜ ಅರಸು ರವರ 109ನೇ ಜನ್ಮ ದಿನಾಚರಣೆಯ ವೇದಿಕೆ ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿಧ್ಯಾರ್ಥಿಗಳಿಗೆ, ವಿವಿಧ ಕ್ರೀಡೆಗಳಲ್ಲಿ, ಪ್ರಬಂಧ, ರಸಪ್ರಶ್ನೆ ಸ್ಪರ್ಧೆಗಳಲ್ಲಿ ವಿಜೇತ ವಿಧ್ಯಾರ್ಥಿಗಳಿಗೆ ಗಣ್ಯರುಗಳು ಪ್ರಶಸ್ತಿ ಪತ್ರ ನೀಡುವದರ ಮೂಲಕ ಗೌರವಿಸಿದರು.

ಕಾರ್ಯಕ್ರಮದಲ್ಲಿ ಬೆಳಗಾವಿ ಉತ್ತರ ಶಾಸಕರಾದ ರಾಜು(ಆಸಿಫ)ಸೇಠ,
ಪಾಲಿಕ ಆಯುಕ್ತರಾದ ಅಶೋಕ ದುಡಗುಂಟಿ, ಡಿ.ದೇವರಾಜ ಅರಸು ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ
ವಿವಿಧ ಶಾಲಾ ಮಕ್ಕಳು, ಗಣ್ಯರು, ಸಾರ್ವಜನಿಕರು ಉಪಸ್ಥಿತರಿದ್ದರು.
ಮೆರವಣಿಗೆ: ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಡಿ.ದೇವರಾಜ ಅರಸು ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಆಕರ್ಷಕ ಮೆರವಣಿಗೆಗೆ ಜಿಲ್ಲಾಧಿಕಾರಿಮೊಹಮ್ಮದ್ ರೋಷನ್ ಅವರು ಚಾಲನೇ ನೀಡಿದರು. ವಿವಿಧ ಜಾನಪದ ಕಲಾತಂಡಗಳೊಂದಿಗೆ ಪ್ರಾರಂಭವಾದ ಮೆರವಣಿಗೆಯು ಜಿಲ್ಲಾಧಿಕಾರಿಗಳ ಕಚೇರಿಯಿಂದ ಕುಮಾರ ಗಂಧರ್ವ ರಂಗಮಂದಿರಕ್ಕೆ ಆಗಮಿಸಿ ಸಮಾರೋಪಗೊಂಡಿತು. ವಿಧ್ಯಾರ್ಥಿಗಳು ಹಾಗೂ ಸಾರ್ವಜನಿಕರು ಮೆರವಣಿಗೆಗೆ ಸಾಥ ನೀಡಿದರು.
ವರದಿ ಪ್ರಕಾಶ್ ಬಸಪ್ಪ ಕುರಗುಂದ..