ಸಿ ಎಂ ಸಿದ್ದರಾಮಯ್ಯ ಅವರಿಂದ ಜಗಜ್ಯೋತಿ ಬಸವೇಶ್ವರರ ಪುತ್ಥಳಿ ಲೋಕಾರ್ಪಣೆ..
ಬೆಳಗಾವಿ : ಶುಕ್ರವಾರ ದಿನಾಂಕ 11/08/2023 ರಂದು ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನಲ್ಲಿ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಗಾಗಿ ರಾಜ್ಯದ ಮುಖ್ಯಮಂತ್ರಿ ಆದಿಯಾಗಿ ಹಲವಾರು ಸಚಿವರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದರು..

ಇದೇ ವೇಳೆ ಅಥಣಿಯಲ್ಲಿ ಜಗಜ್ಯೋತಿ ಬಸವೇಶ್ವರರ ಪುತ್ಥಳಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶುಕ್ರವಾರ ಲೋಕಾರ್ಪಣೆಗೊಳಿಸಿದರು, ಈ ಸಂಧರ್ಬದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಸತೀಶ ಜಾರಕಿಹೋಳಿ, ಲಕ್ಷ್ಮೀ ಹೆಬ್ಬಾಳಕರ್, ಶಾಸಕ ಲಕ್ಷ್ಮಣ ಸವದಿ, ರಾಜು ಕಾಗೆ, ಅಶೋಕ್ ಪಟ್ಟನ್, ಬಾಬಾಸಾಹೇಬ ಪಾಟೀಲ್, ಕಾಂಗ್ರೆಸ್ಸಿನ ಅನೇಕ ಪದಾಧಿಕಾರಿ ಹಾಗೂ ಮುಖಂಡರು ಉಪಸ್ಥಿತರಿದ್ದರು.
ವರದಿ ಪ್ರಕಾಶ ಕುರಗುಂದ..