ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ ಪ್ರಕರಣ..

ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನ ಪ್ರಕರಣ..

10 ಜನರ ವಿರುದ್ಧ ಎಫ್‌ಐಆರ್‌ ದಾಖಲು..

ಬೆಳಗಾವಿ : ಇಲ್ಲಿನ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್‌ಸಿ ಸಿ.ಟಿ ರವಿ ಮೇಲೆ ಹಲ್ಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 10 ಮಂದಿ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ,
ಹೌದು. ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಸಿ.ಟಿ ರವಿ ಅಸಂವಿಧಾನಿಕ ಪದ ಬಳಕೆ ಆರೋಪ ಕೇಳಿಬಂದ ಬಳಿಕ ಸುವರ್ಣಸೌಧದಲ್ಲಿ ಭಾರೀ ಹೈಡ್ರಾಮಾ ನಡೆದಿತ್ತು. ಲಕ್ಷ್ಮಿ ಹೆಬ್ಬಾಳ್ಕರ್‌ ಬೆಂಬಲಿಗರು ಸುವರ್ಣ ಸೌಧದೊಳಕ್ಕೆ ನುಗ್ಗಿ ಹಲ್ಲೆಗೆ ಯತ್ನಿಸಿದ್ದರು.

ಅಲ್ಲದೇ ಹಿರೇಬಾಗೇವಾಡಿ ಪೊಲೀಸ್‌ ಠಾಣೆಯಲ್ಲಿ ಶಾಸಕರ ವಿರುದ್ಧ ಪ್ರಕರಣ ಸಹ ದಾಖಲಾಗಿತ್ತು. ಇದೀಗ ಸಿ.ಟಿ ರವಿ ಕಾನೂನು ಸಮರಕ್ಕೆ ಮುಂದಾಗಿದ್ದಾರೆ.
ಖಾನಾಪುರ ಪೊಲೀಸ್ ಠಾಣೆಗೆ ಸಿ.ಟಿ ರವಿ ಲಿಖಿತ ದೂರು ಸಲ್ಲಿಸಿದ್ದರು. ಈ ಪ್ರಕರಣವನ್ನು ಹಿರೇಬಾಗೇವಾಡಿ ಠಾಣೆಗೆ ವರ್ಗಾಯಿಸಲಾಗಿತ್ತು.

ಭಾನುವಾರ ಸಿ.ಟಿ ರವಿ ಅವರು ನೀಡಿದ್ದ ಲಿಖಿತ ದೂರಿನ ಪ್ರತಿ ಪೋಸ್ಟ್‌ ಮೂಲಕ ಪೊಲೀಸರ ಕೈ ಸೇರಿದ ಬೆನ್ನಲ್ಲೇ ಬೆಳಗಾವಿ ಹಿರೇಬಾಗೇವಾಡಿ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವರದಿ ಪ್ರಕಾಶ ಬಸಪ್ಪ ಕುರಗುಂದ..