ಸೋಮವಾರ ಬೆಳಗಾವಿಗೆ ಸಿಎಂ ಸಿದ್ದರಾಮಯ್ಯ ಆಗಮನ..

ಸೋಮವಾರ ಬೆಳಗಾವಿಗೆ ಸಿಎಂ ಸಿದ್ದರಾಮಯ್ಯ ಆಗಮನ..

ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿ..

ಬೆಳಗಾವಿ : ಇತ್ತೀಚೆಗೆ ರಾಜ್ಯಾದ್ಯಂತ ಮುಡಾ ಪ್ರಕರಣ ತೀವ್ರವಾಗಿ ಚರ್ಚೆ ಆಗುತ್ತಿದ್ದು, ಬಿಜೆಪಿಯವರು ಸಿಎಂ ಅವರ ರಾಜೀನಾಮೆಗೆ ಆಗ್ರಹಿಸಿ ವಾಗ್ದಾಳಿ ನಡೆಸುತ್ತಿದ್ದಾರೆ, ಆದರೆ ಸಿಎಂ ಇದಕ್ಕೆಲ್ಲ ಜಗ್ಗದೆ, ಕಾನೂನಿನ ಹೋರಾಟದ ಮೂಲಕ ಉತ್ತರ ನೀಡುತ್ತೇನೆ ಎಂದು ತಮ್ಮ ಕಾರ್ಯಚಟುವಟಿಕೆಗಳಲ್ಲಿ ನಿರತರಾಗಿದ್ದು ಸೋಮವಾರದಿನಾಂಕ 26/08/2924 ರಂದು ಬೆಳಗಾವಿಗೆ ಆಗಮಿಸುತ್ತಿದ್ದಾರೆ..

ಜಿಲ್ಲೆಯ ಗೋಕಾಕ ಹಾಗೂ ಮೂಡಲಗಿ ತಾಲೂಕಿನ ಕೌಜಲಗಿ, ಕಳ್ಳಿಗುದ್ದಿ, ಯಾದವಾಡ ಹಾಗೂ ಕಲ್ಲೊಳಿ ಗ್ರಾಮಗಳಿಗೆ ಬೇಟಿ ನೀಡಲಿದ್ದು, ಪ್ರತಿ ಗ್ರಾಮಗಳಲ್ಲಿಯೂ ನೂತನವಾಗಿ ಉದ್ಘಾಟನೆ ಆಗುತ್ತಿರುವ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣರ ಮೂರ್ತಿಗೆ ಗೌರವಾರ್ಪಣೆ ಮಾಡುವ ವಿಶೇಷ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ..

ಈ ನಾಲ್ಕು ಗ್ರಾಮಗಳಲ್ಲಿ ಸಂಗೊಳ್ಳಿ ರಾಯಣ್ಣರ ಮೂರ್ತಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಿಎಂ ಸಿದ್ದರಾಮಯ್ಯ ಅವರು ಮತ್ತೆ ಸಂಜೆ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಿಂದ ಬೆಂಗಳೂರಿಗೆ ಪ್ರಯಾಣ ಬೆಳಸುವರು..

ವರದಿ ಪ್ರಕಾಶ್ ಬಸಪ್ಪ ಕುರಗುಂದ..