ಹಳೆಯ ಭೂ ದಾಖಲೆಗಳ ಡಿಜಿಟಲೀಕರಣಕ್ಕೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ..
ಬೆಳಗಾವಿ, ಮಾ.1: ಭೂ ಸುರಕ್ಷಾ ಯೋಜನೆಯಡಿ ಹಳೆಯ ಭೂ ದಾಖಲೆಗಳ ಡಿಜಿಟಲೀಕರಣ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಶುಕ್ರವಾರ(ಮಾ.1) ಚಾಲನೆ ನೀಡಿದರು.

ನಗರದಲ್ಲಿರುವ ನಾಡಕಚೇರಿಯಲ್ಲಿ ಹಳೆಯ ಭೂ ದಾಖಲೆಗಳ ಡಿಜಿಟಲೀಕರಣಕ್ಕೆ ಚಾಲನೆ ನೀಡಿದ ಸಚಿವರು, ಹಳೆಯ ದಾಖಲೆಗಳ ಸಂರಕ್ಷಣೆಗೆ ಡಿಜಿಟಲೀಕರಣ ಸಹಕಾರಿಯಾಗಿದೆ ಎಂದು ಹೇಳಿದರು.

ದಾಖಲೆಗಳ ರಕ್ಷಣೆ ಜತೆಗೆ ತಕ್ಷಣವೇ ಲಭಿಸುವಂತೆ ಅನುಕೂಲ ಕಲ್ಪಿಸಲು ಹಳೆಯ ದಾಖಲೆಗಳ ಡಿಜಿಟಲೀಕರಣ ಅತ್ಯಗತ್ಯವಾಗಿತ್ತು ಎಂದು ಹೇಳಿದರು.
ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು, ಡಿಜಿಟಲೀಕರಣ ವಿಧಾನ ಹಾಗೂ ಹಳೆಯ ದಾಖಲೆಗಳ ಸಂರಕ್ಷಣೆಗೆ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಬೆಳಗಾವಿ(ಉತ್ತರ) ಶಾಸಕರಾದ ಆಸಿಫ್(ರಾಜು) ಸೇಠ್, ಬೆಳಗಾವಿ ತಹಶೀಲ್ದಾರ ಸಿದ್ರಾಯ ಭೋಸಗಿ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವರದಿ ಪ್ರಕಾಶ ಕುರಗುಂದ..