ಬಾಲಕಿಯರ ವಿದ್ಯಾರ್ಥಿ ನಿಲಯ ಉದ್ಘಾಟಿಸಿದ ಸಂಸದೆ ಪ್ರಿಯಾಂಕ ಜಾರಕಿಹೊಳಿ..
ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸರ್ಕಾರಗಳು ಅನೇಕ ಪ್ರೋತ್ಸಾಹ ನೀಡುತ್ತಿವೆ..
ಸಂಸದೆ ಪ್ರಿಯಾಂಕ ಜಾರಕಿಹೊಳಿ..
ಬೆಳಗಾವಿ : ಬಡ ವಿದ್ಯಾರ್ಥಿನಿಯರು ಶಿಕ್ಷಣದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ವಸತಿ ನಿಲಯ ಸೇರಿದಂತೆ ಅನೇಕ ಸೌಲಭ್ಯಗಳನ್ನು ಸರ್ಕಾರ ನೀಡಿ ಪ್ರೋತ್ಸಾಹ ನೀಡುತ್ತಿದೆ ಎಂದು ಚಿಕ್ಕೋಡಿಯ ಸಂಸದೆ ಪ್ರಿಯಾಂಕ ಜಾರಕಿಹೊಳಿ ಹೇಳಿದ್ದಾರೆ..

ಚಿಕ್ಕೋಡಿ ನಗರದಲ್ಲಿ ನೂತನವಾಗಿ ನಿರ್ಮಿಸಲಾದ ದಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯವನ್ನು ಇಂದು ಉದ್ಘಾಟಿಸಿ ಮಾತನಾಡಿದ ಸಂಸದರು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಅನೇಕ ಯೋಜನೆಗಳನ್ನು ಹಾಕಿಕೊಂಡಿವೆ ಎಂದರು.

ಈ ವೇಳೆ ಸಂಪಾದನ ಚರಮೂರ್ತಿ ಮಠದ ಪೂಜ್ಯ ಶ್ರೀ ಅಲ್ಲಮಪ್ರಭು ಸ್ವಾಮೀಜಿಗಳು, ಚಿಕ್ಕೋಡಿ ಶಾಸಕರಾದ ಗಣೇಶ್ಹು ಹುಕ್ಕೇರಿ, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಶಿವಪ್ರಿಯಾ ಕಡೇಚೂರು, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ವರದಿ ಪ್ರಕಾಶ್ ಬಸಪ್ಪ ಕುರಗುಂದ..