ಹೊಸ ವಂಟಮೂರಿ ಗ್ರಾಮ ಪಂಚಾಯತಿಯಲ್ಲಿ ಗ್ಯಾರೆಂಟಿ ಯೋಜನೆಗಳ ಶಿಬಿರ..
ಬೆಳಗಾವಿ ತಾಲೂಕು ಪಂಚ ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಒಂದು ದಿನದ ಶಿಬಿರ..
ಹೊಸ ವಂಟಮುರಿ : ಗುರುವಾರ ದಿನಾಂಕ 08/01/2026ರಂದು ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೆಳಗಾವಿ ತಾಲೂಕ ಅಧ್ಯಕ್ಷರಾದ ಈರಪ್ಪ ಪಾಟೀಲ ಅವರ ನೇತೃತ್ವದಲ್ಲಿ, ಬೆಳಗಾವಿ ತಾಲೂಕಿನ ಹೊಸ ವಂಟಮೂರಿ ಗ್ರಾಮ ಪಂಚಾಯತಿಯಲ್ಲಿ ಒಂದು ದಿನದ ಪಂಚ ಗ್ಯಾರಂಟಿ ಯೋಜನೆಗಳ ಶಿಬಿರ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು.
ಈ ಶಿಬಿರದಲ್ಲಿ ಬೆಳಗಾವಿ ತಾಲೂಕು ಗ್ಯಾರೆಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಈರಪ್ಪ ಪಾಟೀಲ ಅವರು ಮಾತನಾಡಿ, ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಕುರಿತು ಸಾರ್ವಜನಿಕರಿಗೆ ಸಂಪೂರ್ಣ ಮಾಹಿತಿಯನ್ನು ನೀಡಲಾಗಿದ್ದು, ಅವುಗಳ ಸದುಪಯೋಗ ಆಗಲಿ ಎಂದರು.

ಪಂಚ ಗ್ಯಾರಂಟಿ ಯೋಜನೆಗಳು ಸಮಾಜದ ಪ್ರತಿಯೊಂದು ವರ್ಗದ ಜನರ ಬದುಕಿಗೆ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆಯನ್ನು ನೀಡುವ ಉದ್ದೇಶ ಹೊಂದಿವೆ. ಯಾವುದೇ ಅರ್ಹ ವ್ಯಕ್ತಿ ಈ ಯೋಜನೆಗಳಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಗ್ರಾಮ ಪಂಚಾಯತ ಮಟ್ಟದಲ್ಲಿ ಇಂತಹ ಶಿಬಿರಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.
ಇನ್ನು ಇದೇ ಶಿಬಿರದಲ್ಲಿ ಉಪ ತಹಶಿಲ್ದಾರ, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಬೆಳಗಾವಿಯ ಎಂ ಎನ್ ಉಸ್ತಾದ ಅವರು ಅನ್ನಭಾಗ್ಯ ಯೋಜನೆಯ ಬಗ್ಗೆ ಮಾಹಿತಿ ನೀಡುವದರ ಜೊತೆಗೆ ಹೊಸ ಪಡಿತರ ಚೀಟಿ, ಹೆಸರು ತಿದ್ದುಪಡಿ, ವಿಳಾಸ ತಿದ್ದುಪಡಿ ಬಗ್ಗೆ ಮಾಹಿತಿ ನೀಡಿದರು. ಯಾವುದೇ ಕಾರಣಕ್ಕೂ ಏಜಂಟರ ಬಳಿ ತೆರಳದೇ ನೇರವಾಗಿ ಕಛೇರಿಗಳನ್ನು ಸಂಪರ್ಕಿಸಲು ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ಒಂದು ದಿನದ ಈ ಶಿಬಿರದಲ್ಲಿ ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಮುಖಂಡರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.