ಸರ್ಕಾರದ ಮಹತ್ವದ ಯೋಜನೆಗಳನ್ನು ಜನರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಿ..

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಸೂಚನೆ..

ಬೆಳಗಾವಿ : ಮಂಗಳವಾರ ದಿನಾಂಕ 01/08/2023ರಂದು ಕರ್ನಾಟಕ ಸರ್ಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಜಿಲ್ಲೆಯ ರಾಯಭಾಗ ತಾಲ್ಲೂಕಿನ ತಹಶೀಲ್ದಾರ ಕಚೇರಿಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನಡೆಸಿದರು.

ತಾಲೂಕಿನಲ್ಲಿ ಇರುವಂತ ಸಮಸ್ಯೆಗಳ ಬಗ್ಗೆ ಶೀಘ್ರ ಪರಿಹಾರ ಕಲ್ಪಿಸಬೇಕು, ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸಲು ಮತ್ತು ಮೂಲಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಬೇಕು ಎಂಬ ಸೂಚನೆ ನೀಡಿದರು..

ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಯೋಜನೆಯ ಲಾಭಗಳನ್ನು ಫಲಾನುಭವಿಗಳಿಗೆ ಸಮರ್ಪಕವಾಗಿ ತಲುಪಿಸಬೇಕು, ತಾಲೂಕಿನ ಉಳಿದ ಅಭಿವೃದ್ಧಿ ಕಾಮಗಾರಿಗಳನ್ನು ಕಾಲಾಮಿತಿಯಲ್ಲಿ ಪೂರ್ಣಗೊಳಿಬೇಕು ಎಂದು ಅಧಿಕಾರಿಗಳನ್ನು ಸೂಚಿಸಿದರು.

ಈ ಸಂಧರ್ಭದಲ್ಲಿ ಚಿಕ್ಕೋಡಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮಣರಾವ್ ಚಿಂಗಳೇ, ಮಾಜಿ ಶಾಸಕ ಶ್ಯಾಮ್ ಘಾಟಗೆ, ವಿವಿಧ ಇಲಾಖೆಗಳ ತಾಲೂಕಾ ಅಧಿಕಾರಿಗಳು ಉಪಸ್ಥಿತರಿದ್ದರು..

ವರದಿ ಪ್ರಕಾಶ ಕುರಗುಂದ..