ಆನೆ ಹಾವಳಿ ನಿಯಂತ್ರಣ ಸಿಬ್ಬಂದಿಗೆ ಹೆಚ್ಚಿನ ತರಬೇತಿ..
ಸಚಿವ ಈಶ್ವರ ಖಂಡ್ರೆ..
ಸುವರ್ಣ ಸೌಧ ಬೆಳಗಾವಿ : ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರ್ರೆ ಹೇಳಿದರು,
ವಿಧಾನಪರಿಷತ್ತಿನ ಪ್ರಶ್ನೋತ್ತರ ಅವಧಿಯಲ್ಲಿ ಸದಸ್ಯೆ ಡಾ.ತೇಜಸ್ವಿನಿ ಗೌಡ ಅವರು, ಆನೆ ಹಾವಳಿ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆನೆಗಳು ಜನವಸತಿ ಪ್ರದೇಶಕ್ಕೆ ಬರುವುದನ್ನು ತಡೆಯಲು ಅನೆ ಕಂದಕ ನಿರ್ಮಾಣ, ರೇಲ್ವೇ ಬ್ಯಾರಿಕೇಡ್ಗಳ ಅಳವಡಿಕೆಯನ್ನು ಮಾಡಲಾಗುವುದು ಎಂದರು.

2030 ರೊಳಗೆ ಅಪೌಷ್ಠಿಕತೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣ..
ಸಚಿವ ದಿನೇಶ್ ಗುಂಡೂರಾವ್..
ಸುವರ್ಣ ಸೌಧ ಬೆಳಗಾವಿ,: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್ ಅವರು ವಿಷಯ ಪ್ರಸ್ತಾಪಿಸಿ, ರಕ್ತಹೀನತೆ ಮತ್ತು ಅಪೌಷ್ಠಿಕತೆಯಿಂದ ಮಹಿಳೆಯರು ಮತ್ತು ಮಕ್ಕಳು ಬಳಲುತ್ತಿರುವ ಸಮಸ್ಯೆಗಳ ಕುರಿತು ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯಿಸಿದ ಸಚಿವರು, ರಾಜ್ಯದಲ್ಲಿ ಅನೀಮಿಯಾದಿಂದ ಬಳಲುತ್ತಿರುವ ಮಹಿಳೆಯರು ಮತ್ತು ಹದಿಹರೆಯದವರ ಸಂಖ್ಯೆ ಸುಮಾರು 2 ಕೋಟಿ ಎಂದು ಗುರುತಿಸಲಾಗಿದೆ, ಇದರ ನಿವಾರಣೆಗೆ 185 ಕೋಟಿ ರೂ ವೆಚ್ಚದಲ್ಲಿ ಕಾರ್ಯಕ್ರಮ ರೂಪಿಸಲಾಗುತ್ತಿದ್ದು, 2030 ರ ವೇಳೆಗೆ ರಜ್ಯದಲ್ಲಿ ಈ ಪ್ರಮಾಣದಲ್ಲಿ ಗಣನೀಯವಾಗಿ ಕಡಿಮೆಗೊಳಿಸುವ ಗುರಿ ಹೊಂದಲಾಗಿದೆ ಎಂದರು.

ರಾಜ್ಯದಲ್ಲಿ ಇತ್ತೀಚೆಗೆ ಬೆಳಕಿಗೆ ಬಂದ ಭ್ರೂಣ ಹತ್ಯೆ ಕುರಿತಂತೆ ಸದಸ್ಯ ಯು.ಬಿ.ವೆಂಕಟೇಶ್ ಪ್ರಸ್ತಾಪಿಸಿದರು. ಈ ಪ್ರಕರಣವನ್ನು ಈಗಾಗಲೇ ಸಿಓಡಿ ತನಿಖೆಗೆ ಆದೇಶಿಸಿದ್ದು, ಇದರಲ್ಲಿ ಭಾಗಿಯಾದ ಎಲ್ಲರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು.
ವರದಿ ಪ್ರಕಾಶ ಕುರಗುಂದ..