ಇದೇ ಡಿಸೆಂಬರ್ 9ರಂದು ಸುವರ್ಣ ವಿಧಾನಸೌಧ ಮುತ್ತಿಗೆ…

ಇದೇ ಡಿಸೆಂಬರ್ 9ರಂದು ಸುವರ್ಣ ವಿಧಾನಸೌಧ ಮುತ್ತಿಗೆ…

ಪಿ.ರಾಜೀವ್, ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ..

ಬೆಳಗಾವಿ : ನಗರದ ಗ್ರಾಮೀಣ ಮಂಡಲ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ರವರು ಮಾತನಾಡಿ
ರಾಜ್ಯದಲ್ಲಿ ಎರಡು ಸಾವಿರಕ್ಕಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ರೈತರು ಸಾಲ ಮಾಡಿ ಬೆಳೆದ ಬೆಳೆಗಳಿಗೆ ಸರ್ಕಾರ ಖರೀದಿ ಕೇಂದ್ರ ಆರಂಭಿಸಿಲ್ಲ, ಮಳೆಗೆ ಹಾನಿಯಾದ ಬೆಳೆಗಳಿಗೆ ಪರಿಹಾರ ನೀಡಿಲ್ಲ ಇಂತಹ ರೈತ ವಿರೋಧಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಇದೇ ಡಿಸೆಂಬರ್ 9 ರಂದು ಮಂಗಳವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ .ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ಹೇಳಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ, ಮಾಜಿ ಶಾಸಕರಾದ ಸಂಜಯ್ ಪಾಟೀಲ್ ಅವರು ಮಾತನಾಡಿ ಬೃಹತ್ ಪ್ರತಿಭಟನಾ ಮೆರವಣಿಗೆಯು ಬೆಳಗಾವಿ ನಗರದ ಹೊರವಲಯದ ಮಾಲಿನಿ ಸಿಟಿಯಿಂದ ಪ್ರಾರಂಭವಾಗಿ ಪ್ರತಿಭಟನಾ ಪಾದಯಾತ್ರೆ ಮೂಲಕ ತೆರಳಿ ಸುವರ್ಣ ವಿಧಾನಸೌಧ ಮುತ್ತಿಗೆ ಹಾಕಲಾಗುವುದು ನಾನಾ ಜಿಲ್ಲೆಗಳಿಂದ ರೈತರು, ಪಕ್ಷದ ಶಾಸಕರು, ಮಾಜಿ ಶಾಸಕರು, ಪದಾಧಿಕಾರಿಗಳು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು ಬೆಳಗಾವಿ ಗ್ರಾಮೀಣ ಮತಕ್ಷೇತ್ರದಿಂದ ಸಾವಿರಾರು ಸಂಖ್ಯೆಯಲ್ಲಿ ರೈತರು, ಪಕ್ಷದ ಕಾರ್ಯಕರ್ತರು ಭಾಗವಹಿಸಿ ಹೋರಾಟ ಯಶಸ್ವಿಗೊಳಿಸಬೇಕೆಂದು ಹೇಳಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಯುವರಾಜ್ ಜಾಧವ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಮಾದಮ್ಮನವರ್, ಜಿಲ್ಲಾ ಉಪಾಧ್ಯಕ್ಷ ವಿನಯ ಕದಂ ಮುಖಂಡರಾದ ಧನಂಜಯ ಜಾಧವ, ರಾಜೇಂದ್ರ ಹರಕುಣಿ, ರಂಜನಾ ಕೊಲಕಾರ ಹಾಗೂ ಪ್ರಮುಖರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು..

Leave a Reply

Your email address will not be published. Required fields are marked *