ರಾಜ್ಯ ಸರ್ಕಾರದ ವಿರುದ್ಧ ಎಬಿವಿಪಿ ಪ್ರತಿಭಟನೆ..
ಬೆಳಗಾವಿ : ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರಿಗೆ ಪ್ರತಿಭಟನೆ ಕೈಗೊಂಡ ಅಖಿಲ್ ಭಾರತೀಯ ವಿದ್ಯಾರ್ಥಿ ಪರಿಷತ್ ಸಂಘಟನೆಯ ವಿಧ್ಯಾರ್ಥಿಗಳು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ತಮ್ಮ ಅಸಮಾಧಾನ ಹೊರ ಹಾಕಿದರು..
ರಾಜ್ಯ ಸರ್ಕಾರ ಇತ್ತೀಚೆಗೆ ಹೇಳಿಕೆಯೊಂದನ್ನು ನೀಡಿದ್ದು, ಅದರಲ್ಲಿ ಕೇಂದ್ರ ಸರ್ಕಾರ 2020 ರಲ್ಲಿ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರದ್ದು ಪಡಿಸುವುದಾಗಿ ಮಾಹಿತಿ ನೀಡಿದ್ದು, ಆ ಹೇಳಿಕೆಯನ್ನು ವಿರೋಧಿಸಿ, ಇಂದು ನಗರದ ಎಬಿವಿಪಿ ಸಂಘಟೆಯ ಕೆಲ ವಿಧ್ಯಾರ್ಥಿಗಳು ಪ್ರತಿಭಟನೆ ಮಾಡಿದರು..

ಬ್ರಿಟಿಷ್ ಕಾಲದ ಹಳೆಯ ಶಿಕ್ಷಣ ಪದ್ಧತಿಯ ಹೋಗಲಾಡಿಸಿ, ಕೇಂದ್ರ ಸರ್ಕಾರ ನಮ್ಮ ದೇಶಕ್ಕಾಗಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯನ್ನು 2020 ರಲ್ಲಿ ಜಾರಿಗೆ ತಂದಿದ್ದು, ಎಲ್ಲರಿಂದಲೂ ಪ್ರಶಂಸೆಯನ್ನು ಪಡೆದಿತ್ತು, 2020-21 ರಲ್ಲಿ ಕರ್ನಾಟಕ ರಾಜ್ಯದಲ್ಲಿ ಜಾರಿಗೆ ತಂದು, ಎಲ್ಲರ ಗೌರವಕ್ಕೆ ಪಾತ್ರವಾಗಿತ್ತು, ಆದರೆ ಈಗ ರಾಜ್ಯ ಸರ್ಕಾರ ಎನ್ಇಪಿ ಯನ್ನು ರದ್ದು ಮಾಡುತ್ತಿರುವದು ಶಿಕ್ಷಣ ವಿರೋಧಿ ನಿರ್ಧಾರವಾಗಿದೆ ಎಂದು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ..
ಕೇಂದ್ರ ಸರ್ಕಾರ ಜಾರಿಗೆ ತಂದ ಈ ಎನ್ಇಪಿ ದೇಶದ ಪ್ರಮುಖ ಶಿಕ್ಷಣ ತಜ್ಞರ ಅಭಿಪ್ರಾಯ ಪಡೆದು ಸಿದ್ದ ಮಾಡಿದ ನೋಟಿಯಾಗಿದ್ದು, ಎದು ವಿಧ್ಯಾರ್ಥಿ ಕೇಂದ್ರಿತವಾಗಿದೆ, ಇದರಲ್ಲಿ ಯಾವುದೇ ದೋಷಗಳಿದ್ದರೆ ಅದನ್ನು ತಿಳಿಸಿ, ಈ ನೀತಿಯನ್ನು ರದ್ದು ಮಾಡಲಿ ಎನ್ನುವದು ವಿಧ್ಯಾರ್ಥಿಗಳ ಬೇಡಿಕೆಯಾಗಿತ್ತು..

ಪೂರ್ವಗ್ರಹ ಹಾಗೂ ರಾಜಕೀಯ ಪ್ರೇರಿತ, ವಿವೇಚನಾ ರಹಿತ, ವಿಧ್ಯಾರ್ಥಿಗಳ ಹಿತಕ್ಕೆ ಮಾರಕವಾದ ಇಂತಹ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಬಿಡಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ..
ವರದಿ ಪ್ರಕಾಶ ಕುರಗುಂದ..