ಮಹರ್ಷಿ ವಾಲ್ಮೀಕಿ ಜಯಂತಿಯ ಅರ್ಥಪೂರ್ಣ ಆಚರಣೆಗೆ ಜಿಲ್ಲಾಡಳಿತದ ಸಿದ್ಧತೆ..
ಪೂರ್ವಭಾವಿ ಸಭೆಯಲ್ಲಿ ಶಿಕ್ಷಣ ಮತ್ತು ವಿಧ್ಯಾರ್ಥಿ ಪೂರಕ ಸಲಹೆ, ಸೂಚನೆ ನೀಡಿದ ವಿಧ್ಯಾರ್ಥಿ ಮುಖಂಡ..
ಬೆಳಗಾವಿ, : ಸರ್ಕಾರದ ನಿರ್ದೇಶನದ ಅನ್ವಯ ಪ್ರತಿವರ್ಷದಂತೆ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ನಗರದ ಕುಮಾರ ಗಂಧರ್ವ ಕಲಾ ಮಂದಿರದಲ್ಲಿ ಅಕ್ಟೋಬರ್ 28 ರಂದು ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಸೆ.27) ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಯಂತಿ ಆಚರಣೆಯ ದಿನ ಬೆಳಿಗ್ಗೆ 10.30 ಗಂಟೆಗೆ ಕೋಟೆ ಕೆರೆ ಆವರಣದಿಂದ ಸಂಗೊಳ್ಳಿ ರಾಯಣ್ಣ ವೃತ್ತದ ಮಾರ್ಗವಾಗಿ ನಗರದ ಕುಮಾರ ಗಂಧರ್ವ ಕಲಾ ಮಂದಿರದವರೆಗೆ ಮಹರ್ಷಿ ವಾಲ್ಮೀಕಿ ಭಾವಚಿತ್ರದ ಭವ್ಯ ಮೆರವಣಿಗೆ ಕಾರ್ಯಕ್ರಮ ನಡೆಯಲಿದೆ.
ಹತ್ತು ಕಲಾ ತಂಡಗಳು ಭಾಗವಹಿಸಲಿದ್ದು, ಕುಂಭ ಮೇಳ, ಸ್ತ್ರೀ ಸಂಘಗಳು, ಸ್ವ ಸಹಾಯ ಸಂಘಗಳ ಸದಸ್ಯರು ಪಾಲ್ಗೊಳ್ಳಲು ಸಿದ್ಧತೆಗೆ ಮಾಡಿಕೊಳ್ಳಬೇಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಮಹಾನಗರ ಪಾಲಿಕೆ ವತಿಯಿಂದ ನಗರದ ಪ್ರಮುಖ ವೃತ್ತಗಳಲ್ಲಿ ವಾಲ್ಮೀಕಿಯವರ ಭಾವಚಿತ್ರಗಳು ಹಾಗೂ ಅವರ ಕುರಿತು ಶ್ಲೋಕಗಳ ಪೋಸ್ಟರ್, ಬ್ಯಾನರ್ ಗಳನ್ನು ಅಳವಡಿಸುವುದರ ಜೊತೆಗೆ ದೀಪಾಲಂಕಾರ ಮಾಡಬೇಕು ಎಂದು ಸಮಾಜದ ಮುಖಂಡರು ಮನವಿ ಮಾಡಿಕೊಂಡರು.
ಸುಮಾರು 10 ಸಾವಿರ ಜನರಿಗೆ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಮಾಡಲಾಗುವುದು. ಅದೇ ರೀತಿಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು ಎಂದು ಹೇಳಿದರು.
ಪರಿಶಿಷ್ಟ ಸಮುದಾಯದ ವಿವಿಧ ಸಂಘಟನೆಯ ಪ್ರಮುಖರು ಹಾಗೂ ಮುಖಂಡರು ತಮ್ಮ ತಮ್ಮ ಸಲಹೆ ಸೂಚನೆಗಳನ್ನು ನೀಡಿದರು, ಇದೆ ವೇಳೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ವಿಧ್ಯಾರ್ಥಿ ವಕ್ಕೂಟದ ಮುಖಂಡರಾದ ಬರಮು ಕುರಲಿ ಅವರು, ಜಯಂತಿಯ ಉಪನ್ಯಾಸದ ಕುರಿತಾಗಿ, ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳಿಗಾಗಿ ವಿವಿಧ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆ ಏರ್ಪಡಿಸಬೇಕು, ವಿಜೇತರಾದ ವಿದ್ಯಾರ್ಥಿಗಳಿಗೆ ಜಯಂತಿಯ ವೇದಿಕೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಬೇಕು ಎಂಬ ವಿಧ್ಯಾರ್ಥಿ ಪರವಾದ ಸಲಹೆ ನೀಡಿದ್ದು ವಿಶೇಷವಾಗಿತ್ತು..
ಅದೇ ರೀತಿ ಕಾಲೇಜು ವಿಧ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲ ಆಗುವಂತೆ ಐಎಎಸ್ ಕೆಎಎಸ್ ಮಾದರಿಯ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಂಡರೇ ಜಯಂತಿಯ ಆಚರಣೆ ಅರ್ಥಪೂರ್ಣ ಎನಿಸುತ್ತದೆ ಎಂಬ ಸಲಹೆ ನೀಡಿದ್ದು, ಅದಕ್ಕೆ ಅಧಿಕಾರಿಗಳಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ದೊರಕಿದ್ದು ಸಂತಸದ ಸಂಗತಿ..
ಅಪರ ಜಿಲ್ಲಾಧಿಕಾರಿ ವಿಜಯಕುಮಾರ ಹೊನಕೇರಿ, ಮಹಾನಗರ ಪಾಲಿಕೆ ಆಯುಕ್ತರಾದ ಅಶೋಕ ದುಡಗುಂಟಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರಾದ ಲಕ್ಷ್ಮಣ ಬಬಲಿ, ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ ಕುರಿಹುಲಿ,
ಸಮಾಜದ ಮುಖಂಡರಾದ ರಾಜಶೇಖರ್ ತಳವಾರ, ಭಾವಕಣ್ಣಾ ಬಂಕ್ಯಾಗೋಳ, ಯಲ್ಲಪ್ಪ ಕೋಳೇಕರ, ಮಹಾದೇವ ತಳವಾರ, ವಿಜಯ್ ತಳವಾರ, ಸುಶೀಲಾ ದಡ್ಡಿಕರ, ಡಾ. ಕವಿತಾ ಕುಸುಗಲ್, ಬಾಳೇಶ ದಾಸನಟ್ಟಿ, ಮಹೇಶ್ ಶಿಗಿಹಳ್ಳಿ, ಯಲ್ಲಪ್ಪ ಕೋಳೆಕರ್, ಶೇಟ್ಟೆಪ್ಪ ಜುಂಟ, ಯಲ್ಲಪ್ಪ ಬುಡ್ರಿ, ಬರಮು ಕುರಲಿ, ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.
ವರದಿ ಪ್ರಕಾಶ ಕುರಗುಂದ..