ಜಾನುವಾರು ಚಿಕಿತ್ಸಾ ಶಿಬಿರಕ್ಕೆ ಭೇಟಿ ನೀಡಿದ ಕೇಂದ್ರ ಅಧ್ಯಯನ ತಂಡ..
ಬೆಳಗಾವಿ:, ಅ.6: ಜಿಲ್ಲೆಯ ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಆಗಮಿಸಿರುವ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಅಜಿತ್ ಕುಮಾರ್ ಸಾಹು ನೇತೃತ್ವದ ಕೇಂದ್ರ ಬರ ಅಧ್ಯಯನ ತಂಡ ಶುಕ್ರವಾರ(ಅ.6) ರಂದು ಯರಗಟ್ಟಿ ತಾಲೂಕಿನ ಯರಗಣವಿ ಗ್ರಾಮದಲ್ಲಿ ಆಯೋಜಿಸಿರುವ ಜಾನುವಾರು ಆರೋಗ್ಯ ಚಿಕಿತ್ಸಾ ಶಿಬಿರಕ್ಕೆ ಭೇಟಿ ನೀಡಿ, ಗ್ರಾಮದ ಜನಪ್ರತಿನಿಧಿಗಳು ಹಾಗೂ ರೈತರ ಜೊತೆ ಸ್ಥಳಿಯ ಸಮಸ್ಯೆಗಳ ಬಗ್ಗೆ ಚರ್ಚಿಸಿದರು.

ಇದೇ ಸಮಯದಲ್ಲಿ ಗ್ರಾಮಸ್ಥರು ಜಿಲ್ಲಾಧಿಕಾರಿ ನಿತೇಶ್ ಪಾಟೀಲರವರಿಗೆ ಮಿನಿಕಿಟ್ ಗಳನ್ನು ಸರಬರಾಜು ಮಾಡಲು ವಿನಂತಿಸಿದರು.
ಪಶುಪಾಲನೆ ಮತ್ತು ಪಶುವೈದ್ಯಕೀಯ ಇಲಾಖೆಯ ಉಪ ನಿರ್ದೇಶಕ ಡಾ.ರಾಜೀವ್ ಕೂಲೇರ್ ರವರು ಬರ ಪರಿಹಾರ ತಂಡಕ್ಕೆ ಗ್ರಾಮದ ಜಾನುವಾರುಗಳಿಗೆ ರಾಷ್ಟ್ರೀಯ ಕಾಲು ಬಾಯಿ ಬೇನೆ ಹಾಗೂ ರೇಬೀಸ್ ಲಸಿಕಾ ಅಭಿಯಾನದ ಮಾಹಿತಿಯನ್ನು ವಿವರಿಸಿದರು. ಶಿಬಿರದಲ್ಲಿ ಒಟ್ಟು 381 ವಿವಿಧ ಜಾನುವಾರುಗಳಿಗೆ ಚಿಕಿತ್ಸೆ ನೀಡಿ ಲವಣ ಮಿಶ್ರಣಗಳನ್ನು ಪಶು ವೈದ್ಯರು ವಿತರಿಸಿದರು. ಡಾ. ಎಮ್ ವಿ ಪಾಟೀಲ, ಡಾ. ಅನೀಲ ಮರಲಿಂಗನವರ, ಸಿಬ್ಬಂದಿ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಎಣ್ಣೆಬೀಜ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕ ಡಾ.ಕೆ.ಪೊನ್ನುಸ್ವಾಮಿ, ಕೇಂದ್ರ ಆರ್ಥಿಕ ವೆಚ್ಚ ಇಲಾಖೆಯ ಸಹಾಯಕ ನಿರ್ದೇಶಕರಾದ ಮಹೇಂದ್ರ ಚಂಡೇಲಿಯಾ, ನೀತಿ ಆಯೋಗದ ಸಂಶೋಧನಾ ಅಧಿಕಾರಿ ಶಿವಚರಣ ಮೀನಾ, ಕರ್ನಾಟಕ ರಾಜ್ಯ ಕೃಷಿ ಇಲಾಖೆಯ ಆಯುಕ್ತರಾದ ವೈ.ಎಸ್.ಪಾಟೀಲ ಅವರು ತಂಡದಲ್ಲಿದ್ದರು.
ವರದಿ ಪ್ರಕಾಶ ಕುರಗುಂದ..