ಜನರ ಸಮಸ್ಯ ಆಲಿಸಲು ನಂದಗಡಕ್ಕೆ ಪಯಣಿಸಿದ ಜಿಲ್ಲಾಧಿಕಾರಿಗಳು..
ಸರ್ಕಾರಿ ಬಸ್ಸಿನಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪಯಣ..
ಬೆಳಗಾವಿ : ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಸ್ಥಳೀಯವಾಗಿಯೇ ಸಮಸ್ಯೆಗಳನ್ನು ಪರಿಹರಿಸಲು ಅನುಕೂಲವಾಗುವಂತೆ ಖಾನಾಪುರ ತಾಲ್ಲೂಕಿನ ನಂದಗಡದಲ್ಲಿ ಇಂದು (ಅ.18) ಹಮ್ಮಿಕೊಳ್ಳಲಾಗಿರುವ “ಜನತಾ ದರ್ಶನ” ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ತಂಡವು ಸಾರಿಗೆ ಸಂಸ್ಥೆಯ ಬಸ್ ನಲ್ಲಿ ನಂದಗಡಕ್ಕೆ ತೆರಳಿತು.

ಮಹಿಳಾ ಅಧಿಕಾರಿಗಳು ಶಕ್ತಿ ಯೋಜನೆಯಡಿ ಉಚಿತವಾಗಿ ಪ್ರಯಾಣಿಸಿದರೆ ಜಿಲ್ಲಾಧಿಕಾರಿಗಳು ಸೇರಿದಂತೆ ಇತರೆ ಅಧಿಕಾರಿಗಳು ಟಿಕೆಟ್ ಪಡೆದುಕೊಂಡು ತೆರಳಿದರು.
ಈ ವೇಳೆ ಅಪರ ಜಿಲ್ಲಾಧಿಕಾರಿ ವಿಜಯಕುಮಾರ್ ಹೊನಕೇರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಶ್ರೀಶೈಲ ಕಂಕನವಾಡಿ, ಪಶುಸಂಗೋಪನಾ ಇಲಾಖೆಯ ರಾಜು ಕೊಲೇರ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಬಸವರಾಜ್ ಕುರಿಹುಲಿ, ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಶಿವನಗೌಡ ಪಾಟೀಲ್ ಹಾಗೂ ಜಿಲ್ಲಾಮಟ್ಟದ ಇಲಾಖೆಗಳ ಬಹುತೇಕ ಅಧಿಕಾರಿಗಳು ಉಪಸ್ಥಿತರಿದ್ದರು.

ವರದಿ ಪ್ರಕಾಶ್ ಕುರಗುಂದ..