ಮಹಿಳೆಯರ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ತಡೆಯ ಜನಜಾಗೃತಿ ಕಾರ್ಯಕ್ರಮ..
ಜನಜಾಗೃತಿಗಾಗಿ ಬೆಂಗಳೂರಿನಿಂದ ಮುಂಬೈವರೆಗೆ ಬೀದಿನಾಟಕ ಬೈಕ್ ರ್ಯಾಲಿ ಆಯೋಜನೆ..
ಬೆಳಗಾವಿ : ಬುಧವಾರ ನಗರದ ಖಾಸಗಿ ಹೋಟೆಲಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿ ಹಾಗೂ ಓಯಸಿಸ್ ಸಂಸ್ಥೆಯ ಪದಾಧಿಕಾರಿಗಳು ಮಹಿಳೆ ಮತ್ತು ಮಕ್ಕಳ ಅಭಿವೃದ್ದಿ ಹಾಗೂ ಅವರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕೈಗೊಳ್ಳುತ್ತಿರುವ ವಿಶೇಷ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು..

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಪದಾಧಿಕಾರಿಯಾದ ಸಂಗೀತಾ ಎಸ್ ಅವರು, ಬೆಳಗಾವಿಯ ಮಹಿಳಾ ಕಲ್ಯಾಣ ಸಂಸ್ಥೆ ಹಾಗೂ ಓಯಸಿಸ್ ಸಂಸ್ಥೆ ಬಹಳ ವರ್ಷಗಳಿಂದ ಮಹಿಳಾ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ವಿರುದ್ಧ ಹೋರಾಡಿ, ಏಷ್ಟೋ ಇಂತಹ ಕಹಿಘಟನೆಗಳಿಗೆ ತಡೆ ಹಾಕಿದ್ದೇವೆ, ಈಗಲೂ ಕೂಡ ನಾವು ಸಮಾಜದ ಎಲ್ಲಾ ಸದಸ್ಯರಿಗೆ ಅರಿವು ಹಾಗೂ ಜಾಗೃತಿ ಮೂಡಿಸುವ ಸಲುವಾಗಿ ಬೈಕ್ ರ್ಯಾಲಿ ಮತ್ತು ಬೀದಿ ನಾಟಕ ಪ್ರದರ್ಶನ ಮಾಡಿ ಮಹಿಳೆ ಮತ್ತು ಮಕ್ಕಳ ಸಂರಕ್ಷಣೆ ಹೇಗೆ ಮಾಡಬೇಕೆಂದು ಅರಿವು ಮೂಡಿಸುವ ಕಾರ್ಯಕ್ರಮ ಹಾಕಿಕೊಂಡಿದ್ದೇವೆ ಎಂದಿದ್ದಾರೆ..
ಇನ್ನು ಓಯಸಿಸ್ ಸಂಸ್ಥೆಯ ಪದಾಧಿಕಾರಿ ಸೆಂಥಿಲಕುಮಾರ ಅವರು ಮಾತನಾಡಿ, ಮಹಿಳೆ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ತಡೆದು, ರಕ್ಷಣೆ ಮತ್ತು ಪುನರ್ವಸತಿ ನೀಡಿ, ಶಿಕ್ಷಣ ಮತ್ತು ಉದ್ಯೋಗದ ವ್ಯವಸ್ಥೆ ಕೂಡ ನಮ್ಮ ಸಂಸ್ಥೆಯಿಂದ ಮಾಡುತ್ತಿದ್ದೇವೆ ಎಂದರು,

ಇತ್ತೀಚೆಗೆ ಮಹಿಳೆ ಮತ್ತು ಮಕ್ಕಳ ಮೇಲೆ ಹಲವಾರು ಅತ್ಯಾಚಾರ, ಕಾಣೆ, ಲೈಂಗಿಕ ದೌರ್ಜನ್ಯ, ಪೋಕ್ಸೋ ಪ್ರಕರಣ ಹಾಗೂ ಮಾರತದಂತಹ ಪ್ರಕರಣ ಹೆಚ್ಚಾಗುತ್ತಿದ್ದು ಅವುಗಳ ನಿಯಂತ್ರಣಕ್ಕಾಗಿ ಇಂದು ನಮ್ಮ ಸಂಸ್ಥೆಗಳಿಂದ ಸಾಮಾಜಿಕ ಅರಿವು ಮೂಡಿಸುವ ಸಲುವಾಗಿ ಬೆಂಗಳೂರಿನಿಂದ ಮುಂಬೈವರೆಗೆ ವಿದೇಶದ ಆರು ಪ್ರಜೆಗಳೊಂದಿಗೆ ಹಾಗೂ ಬೀದಿ ನಾಟಕದ ತಂಡದೊಂದಿಗೆ ದೇಶದ ವಿವಿಧ ನಗರಗಳಲ್ಲಿ ರ್ಯಾಲಿ ಹಮ್ಮಿಕೊಂಡಿದೆ ಎಂಬ ಮಾಹಿತಿ ನೀಡಿದ್ದಾರೆ..

ಇನ್ನು ಬೆಳಗಾವಿ ಮಹಿಳಾ ಕಲ್ಯಾಣ ಸಂಸ್ಥೆಯ ಪದಾಧಿಕಾರಿ ವೈಜಯಂತಿ ಚೌಗುಲಾ ಮಾತನಾಡಿ, ಬೆಳಗಾವಿಯಲ್ಲಿ ನಮ್ಮ ಸಂಸ್ಥೆಯಿಂದ ಬೀದಿ ನಾಟಕ ಹಾಗೂ ರ್ಯಾಲಿ ಆಯೋಜನೆ ಮಾಡಲಾಗಿದೆ, ಮಹಿಳಾ ಕಲ್ಯಾಣ ಸಂಸ್ಥೆಯ “ಉಜ್ವಲಾ” ಮಹಿಳೆಯರ ರಕ್ಷಣೆ ಮತ್ತು ಪುನರ್ವಸತಿ ಕೇಂದ್ರದಲ್ಲಿ ದಾಖಲಾದ ಪ್ರಕರಣ ಹಾಗೂ ಅವರಿಗೆ ನೀಡಿದ ರಕ್ಷಣೆಯ ಬಗ್ಗೆ ಮಾಹಿತಿ ನೀಡಿದರು..
ಈ ಸುದ್ದಿಗೋಷ್ಠಿಯಲ್ಲಿ ಸೆಂಥಿಲ್ ಕುಮಾರ್, ಸಂಗೀತಾ ಎಸ್, ವೈಜಯಂತಿ ಮಾಲಾ, ಕಿರಣ ಚೌಗೂಲಾ ಮತ್ತಿತರರು ಹಾಜರಿದ್ದರು..
ವರದಿ ಪ್ರಕಾಶ ಕುರಗುಂದ..