ಅರಣ್ಯ ಇಲಾಖೆಯ ವೃತ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಸಚಿವರು..
ಇಲ್ಲಿ ಸ್ಪರ್ಧೆ ಮಾಡುವ ಕ್ರೀಡಾಪಟುಗಳು, ರಾಷ್ಟ್ರೀಯ ಮಟ್ಟದಲ್ಲಿ ಆಡುವಂತಾಗಲಿ..
ಗೋಕಾಕ : ಸೋಮವಾರ ದಿನಾಂಕ 27/11/2023ರಂದು ಕರ್ನಾಟಕ ಸರ್ಕಾರದ ಲೋಕೋಪಯೋಗಿ ಇಲಾಖೆ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಗೋಕಾಕ ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ಕ್ರೀಡಾಕೂಟ ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಶುಭಾಶಯ ಕೋರಿದರು..

ಕರ್ನಾಟಕ ಅರಣ್ಯ ಇಲಾಖೆ ವತಿಯಿಂದ ಆಯೋಜಿಸಿದ ಬೆಳಗಾವಿ ವೃತ್ತ ಮಟ್ಟದ ಅರಣ್ಯ ಕ್ರೀಡಾಕೂಟವನ್ನು ಉದ್ಘಾಟಿಸಿದ ಬಳಿಕ ಸ್ವಾಗತಾಭಿನಂದನೆ ಸ್ವೀಕರಿಸಿ ಮಾತನಾಡಿದ ಸಚಿವರು, ಕ್ರೀಡೆ ಇಂದು ಎಲ್ಲಾ ಕ್ಷೇತ್ರಕ್ಕೂ, ವಯೋಮಾನಕ್ಕೆ ಅವಶ್ಯಕವಾಗಿರುವ ಚಟುವಟಿಕೆ, ಕ್ರೀಡೆಯಿಂದ ದೈಹಿಕ ಸದೃಢತೆಯೊಂದಿಗೆ, ಮಾನಸಿಕ ಆರೋಗ್ಯವೂ ಕೂಡಾ ಲಭಿಸುತ್ತದೆ ಎಂದರು.
ಪ್ರತಿ ವರ್ಷ ಅರಣ್ಯ ಇಲಾಖೆಯಿಂದ ದೈಹಿಕ ಕ್ಷಮತೆಯ ಇಂತಹ ಹಲವು ಚಟುವಟಿಕೆಗಳನ್ನು ನಾವು ಕಾಣುತ್ತೇವೆ, ಅರಣ್ಯ ಅಧಿಕಾರಿಗಳು ಅಚ್ಚುಕಟ್ಟಾಗಿ ಕ್ರೀಡೆ ಮುಂತಾದ ಚಟುವಟಿಕೆಗಳನ್ನು ಕೈಗೊಳ್ಳುವುದರಿಂದ ಎಲ್ಲರೂ ಕ್ರಿಯಾಶೀಲರಾಗಿ ಇರುವುದಕ್ಕೆ ಅನುಕೂಲ ಆಗಿದೆ ಎಂದ ಸಚಿವರು, ಇಲ್ಲಿ ಭಾಗಿಯಾದ ಕ್ರೀಡಾಪಟುಗಳು ಯಶಸ್ವಿಯಾಗಿ ರಾಷ್ಟ್ರೀಯ ಮಟ್ಟದಲ್ಲಿ ಮಿಂಚುವಂತೆ ಆಗಲಿ ಎಂದು ಶುಭಹಾರೈಸಿದರು..

ಈ ಸಂದರ್ಭದಲ್ಲಿ ಸಚಿವರೊಂದಿಗೆ, ಬೆಳಗಾವಿ ಅರಣ್ಯ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಯಾದ ಮಂಜುನಾಥ ಚೌಹಾಣ್, ಗೋಕಾಕ್ ವೃತ್ತದ ಡಿಸಿಎಫ್, ಇನ್ನುಳಿದ ಅರಣ್ಯ ಇಲಾಖೆಯ ಸಿಬ್ಬಂದಿಗಳು ಭಾಗಿಯಾಗಿದ್ದರು..
ವರದಿ ಪ್ರಕಾಶ ಕುರಗುಂದ..