ಪತ್ರಕರ್ತರ ಊಟದ ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ…

ಪತ್ರಕರ್ತರ ಊಟದ ಸ್ಥಳಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ

ಸುವರ್ಣಸೌಧ ಬೆಳಗಾವಿ, ಡಿಸೆಂಬರ್ 5 :- ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್ 4 ರಿಂದ ಆರಂಭಗೊಂಡಿರುವ ವಿಧಾನ ಮಂಡಲದ ಚಳಿಗಾಲದ ಅಧಿವೇಶನದ ವರದಿಗಾಗಿ ಆಗಮಸಿದ ಮಾಧ್ಯಮ ಪ್ರತಿನಿಧಿಗಳಿಗೆ ಸುವರ್ಣ ವಿಧಾನಸೌಧದ ನೆಲ ಮಹಡಿಯಲ್ಲಿ ಊಟದ ವ್ಯವಸ್ಥೆ ಮಾಡಿರುವ ಸ್ಥಳಕ್ಕೆ ಇಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿ ಪರಿಶೀಲಿಸಿದರು.

ಈ ವೇಳೆ ರೋಟಿ ತಯಾರಿಯಾಗುವ ಪ್ರಕ್ರಿಯೆಯನ್ನು ಖುದ್ದು ಪರಿಶೀಲಿಸಿದ ಸಚಿವರು, ಯಾವುದೇ ಲೋಪದೋಷಗಳಿಗೆ ಅವಕಾಶ ನೀಡದೆ ಆಹಾರ ತಯಾರಿಕೆ ಹಾಗೂ ಆತಿಥ್ಯ ಸತ್ಕಾರದಲ್ಲಿ ಅತ್ಯಂತ ಕಟ್ಟುನಿಟ್ಟಾಗಿ ನಿಭಾಯಿಸಲು ತಿಳಿಸಿದರು.

ನಂತರ ಅಧಿವೇಶನದ ಕಾರ್ಯದಲ್ಲಿ ತೊಡಗಿರುವ ಅಧಿಕಾರಿಗಳಿಗೆ ಪ್ರತ್ಯೇಕವಾಗಿ ಮಾಡಿರುವ ಊಟದ ಸ್ಥಳಗಳಿಗೂ ಸಚಿವ ಸತೀಶ್ ಜಾರಕಿಹೊಳಿ ಅವರು ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ನಿತೀಶ್ ಪಾಟೀಲ್ ಸೇರಿದಂತೆ ಬೆಳಗಾವಿ ಜಿಲ್ಲಾಡಳಿತ ಹಾಗೂ ವಾರ್ತಾ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಹಾಜರಿದ್ದರು.

ವರದಿ ಪ್ರಕಾಶ ಕುರಗುಂದ..