ಸಮಕಾಲೀನ ಸಮಾಜಕ್ಕೆ ಸೈನಿಕ ಮಾದರಿಯ ಶಾಲೆಗಳು ತುಂಬಾ ಅವಶ್ಯಕ..
ಸಚಿವ ಸತೀಶ ಜಾರಕಿಹೊಳಿ..
ಬೆಳಗಾವಿ,: ಕ್ರಾಂತಿವೀರ ರಾಯಣ್ಣನ ಹುಟ್ಟೂರು ಸಂಗೊಳ್ಳಿ ಮತ್ತು ನೇಣುಗಂಬಕ್ಕೇರಿದ ಖಾನಾಪುರ ತಾಲ್ಲೂಕಿನ ನಂದಗಡದ ಸಮಗ್ರಅಭಿವೃದ್ಧಿಗೆ ಸರಕಾರ ಬದ್ಧವಿದ್ದು, ಮುಂಬರುವ ದಿನಗಳಲ್ಲಿ ಹೆಚ್ಚಿನ ಅನುದಾನ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಬೆಳಗಾವಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಇಲಾಖೆಯ ಆಶ್ರಯದಲ್ಲಿ ಬೈಲಹೊಂಗಲ್ ತಾಲ್ಲೂಕಿನ ಸಂಗೊಳ್ಳಿ ಗ್ರಾಮದಲ್ಲಿ ಬುಧವಾರ ಏರ್ಪಡಿಸಲಾಗಿದ್ದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ನಂತರ ವೇದಿಕೆಯಲ್ಲಿ ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಮಾತನಾಡಿ, ಸಮಕಾಲೀನ ಸಮಾಜಕ್ಕೆ ಶಿಕ್ಷಣ ಎಷ್ಟು ಮುಖ್ಯ, ಅದರ ಸಾಕಾರಕ್ಕಾಗಿ ಸರ್ಕಾರಗಳು ಯಾವ ರೀತಿಯಲ್ಲಿ ಕಾರ್ಯಪ್ರವರ್ತರಾಗಬೇಕು ಎಂದು ಸೂಕ್ಷ್ಮವಾಗಿ ಹೇಳಿದ್ದಾರೆ..

ಸೈನಿಕ ಶಾಲೆ ಮಾದರಿಯ ಶಾಲೆಗಳನ್ನು ಆರಂಭಿಸಲು ಜಾರಕಿಹೊಳಿ ಒತ್ತಾಯ:
ಬೆಳಗಾವಿ ಜಿಲ್ಲಾ ಉಸ್ತುವಾರಿ ಹಾಗೂ ಲೋಕೋಪಯೋಗಿ ಇಲಾಖೆ ಸಚಿವರಾದ ಸತೀಶ್ ಜಾರಕಿಹೊಳಿ, ಸಂಗೊಳ್ಳಿ ರಾಯಣ್ಣನವರ ಹೆಸರು ದೇಶದಾದ್ಯಂತ ಪ್ರಸಿದ್ಧಿಗೊಳಿಸಲು ಅನುಕೂಲವಾಗುವಂತೆ ಸೈನಿಕ ಶಾಲೆಯನ್ನು ಆರಂಭಿಸಲಾಗಿದೆ. ಈ ಶಾಲೆ ಇಡೀ ದೇಶಕ್ಕೆ ಮಾದರಿಯಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.
ಸ್ಥಳೀಯ ಮಕ್ಕಳಿಗೆ ಪ್ರವೇಶ ಕಲ್ಪಿಸಲು ಅನುಕೂಲವಾಗುವಂತೆ ರಾಜ್ಯದಾದ್ಯಂತ ಸೈನಿಕ ಶಾಲೆಯ ಮಾದರಿಯಲ್ಲಿ ಸಂಗೊಳ್ಳಿ ರಾಯಣ್ಣ ಶಾಲೆಗಳನ್ನು ಸ್ಥಾಪಿಸಬೇಕಿದೆ. ಈ ನಿಟ್ಟಿನಲ್ಲಿ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಸತೀಶ್ ಜಾರಕಿಹೊಳಿ ಒತ್ತಾಯಿಸಿದರು.
ಇದೇ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆಯ ಕೆಲಸಕಾರ್ಯಗಳಿಗೆ ಅನುಕೂಲವಾಗುವಂತೆ ನೂತನ ಮುಖ್ಯ ಎಂಜಿನಿಯರ್ ಕಟ್ಟಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆನ್ ಲೈನ್ ಮೂಲಕ ಉದ್ಘಾಟಿಸಿದರು.

ಸರಕಾರಿ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಸಂಸದರಾದ ಮಂಗಲ ಅಂಗಡಿ, ಬೈಲಹೊಂಗಲ ಶಾಸಕರಾದ ಮಹಾಂತೇಶ್ ಕೌಜಲಗಿ, ಶಾಸಕರಾದ ಆಸಿಫ್ ಸೇಠ್, ಗಣೇಶ್ ಹುಕ್ಕೇರಿ, ಬಾಬಾಸಾಹೇಬ್ ಪಾಟೀಲ, ಮಹೇಂದ್ರ ತಮ್ಮಣ್ಣವರ, ವಿಶ್ವಾಸ್ ವೈದ್ಯ, ಮಾಜಿ ಸಚಿವರು ಹಾಗೂ ಶಾಸಕರಾದ ಎಚ್.ವೈ.ಮೇಟಿ, ಎಚ್.ಎಂ.ರೇವಣ್ಣ, ವಿಧಾನಪರಿಷತ್ ಸದಸ್ಯ ನಾಗರಾಜ್, ಮಾಜಿ ಸಚಿವರಾದ ಅಂಜಲಿ ನಿಂಬಾಳ್ಕರ್, ಸಂಗೊಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ರೂಪಾ ಚಚಡಿ ಸೇರಿದಂತೆ ಅನೇಕ ಜನಪ್ರತಿನಿಧಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಸಂಗೊಳ್ಳಿ ಸೇರಿದಂತೆ ವಿವಿಧ ಭಾಗಗಳಿಂದ ಸಾವಿರಾರು ಜನರು ಉತ್ಸವದಲ್ಲಿ ಪಾಲ್ಗೊಂಡಿದ್ದರು.
ವರದಿ ಪ್ರಕಾಶ ಕುರಗುಂದ..