ಲೋಕಸಮರದಲ್ಲಿ ಪ್ರಚಂಡ ದಿಗ್ವಿಜಯಕ್ಕೆ ಬಿಜೆಪಿ ಸಿದ್ಧತೆ..
ಬೆಳಗಾವಿ :ಇಂದು ನಗರದ ಕೆಎಲ್ಇ ಜಿರಗೆ ಭವನದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನೇತೃತ್ವದಲ್ಲಿ ಬೆಳಗಾವಿ ವಲಯದ ಕೋರ್ ಕಮಿಟಿ ಸಭೆ ನಡೆಸಲಾಯಿತು.

ಬೆಳಗಾವಿ ವಲಯದ ಪಕ್ಷದ ಪ್ರಮುಖ ನಾಯಕರು ಹಾಗೂ ಪದಾಧಿಕಾರಿಗಳು ಭಾಗಿಯಾದ ಈ ಸಭೆಯಲ್ಲಿ ಲೋಕ ಸಮರದಲ್ಲಿ ಪ್ರಚಂಡ ದಿಗ್ವಿಜಯ ಸಾಧಿಸುವ ನಿಟ್ಟಿನಲ್ಲಿನ ಸಿದ್ಧತೆಗಳು ಹಾಗೂ ಕಾರ್ಯತಂತ್ರಗಳ ಕುರಿತು ಚರ್ಚಿಸಲಾಯಿತು.

ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್, ಕೇಂದ್ರ ಸಚಿವ ಪ್ರಲ್ಹಾದ್ ಜೋóಶಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಬೆಳಗಾವಿ ವಲಯದ ಪಕ್ಷದ ಶಾಸಕರು ಹಾಗೂ ಪ್ರಮುಖರು ಉಪಸ್ಥಿತರಿದ್ದರು..
ವರದಿ ಪ್ರಕಾಶ ಕುರಗುಂದ..