ಶುಭ ಸೋಮವಾರದಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್…

ಶುಭ ಸೋಮವಾರದಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್..

ಬೆಳಗಾವಿ : ಲೋಕಸಭಾ ಕ್ಷೇತ್ರದ ಬಿಜೆಪಿ‌ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಸೋಮವಾರ (ಏ.15) ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಅವರಿಗೆ ನಾಮಪತ್ರ ಸಲ್ಲಿಸಿದರು..

ಸೋಮವಾರ ಅತ್ಯಂತ ಸರಳವಾಗಿ ನಾಮಪತ್ರ ಸಲ್ಲಿಸಿರುವ ಜಗದೀಶ್ ಶೆಟ್ಟರ ಅವರು ಇದೇ ಬುಧವಾರ ದಿನಾಂಕ 17ರಂದು ಬಿ ಎಸ್ ಯಡಿಯೂರಪ್ಪ ಅವರ ಮುಂದಾಳತ್ವದಲ್ಲಿ, ಹಲವಾರು ನಾಯಕರು, ಸಾವಿರಾರು ಕಾರ್ಯಕರ್ತರು, ಹಾಗೂ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದ ಸಡಗರವನ್ನು ತಮ್ಮ ಜನಬೆಂಬಲದೊಂದಿಗೆ ಸಂಭ್ರಮಿಸುವ ತಯಾರಿಯಲ್ಲಿದ್ದಾರೆ..

ಇಂದು ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಮಾಜಿ ಸಚಿವರಾದ ರಮೆಶ್ ಜಾರಕಿಹೊಳಿ, ಸಂಸದರಾದ ಮಂಗಲ ಅಂಗಡಿ, ಮಾಜಿ ಶಾಸಕ ಅನಿಲ್ ಬೆನಕೆ, ವಿಧಾನ ಪರಿಷತ್ ಸದಸ್ಯ ಹಣಮಂತ ನಿರಾಣಿ ಉಪಸ್ಥಿತರಿದ್ದರು.

ವರದಿ ಪ್ರಕಾಶ್ ಕುರಗುಂದ..