ಅರಭಾವಿ ಮತಕ್ಷೇತ್ರದ ಪ್ರವಾಹ ಪೀಡಿತ ಸ್ಥಳಗಳಿಗೆ ಬೇಟಿ…

ಅರಭಾವಿ ಮತ ಕ್ಷೇತ್ರದ ಪ್ರವಾಹ ಪೀಡಿತ ಸ್ಥಳಗಳಿಗೆ ಬೇಟಿ..

ಕಾಳಜಿ ಕೇಂದ್ರದಲ್ಲಿದ್ದ ಸಂತ್ರಸ್ತರಿಗೆ ಧೈರ್ಯ ತುಂಬಿದ ಸರ್ವೋತ್ತಮ ಜಾರಕಿಹೊಳಿ..

ಗೋಕಾಕ : ಅರಭಾವಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಬಾಲಚಂದ್ರ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಯುವ ನಾಯಕರಾದ ಸರ್ವೋತ್ತಮ ಜಾರಕಿಹೊಳಿ ಅವರು ಕ್ಷೇತ್ರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಬೇಟಿ ನೀಡಿ, ಹಾನಿಗೊಳಗಾದ ಜಾಗಗಳನ್ನು ಪರಿಶೀಲಿಸಿದ್ದಾರೆ..

ಕ್ಷೇತ್ರದ ಪ್ರವಾಹ ಪೀಡಿತ ಗ್ರಾಮಗಳಾದ ಅಡಿಬಿಟ್ಟಿ , ಚಿಗಡೊಳ್ಳಿ , ಮೆಳವಂಕಿ , ಕಲಾರಕೊಪ್ಪ , ಹಡಿಗಿನಾಳ , ಉದಗಟ್ಟಿ , ತಳಕಟನಾಳ ಗ್ರಾಮಗಳ ಕಾಳಜಿ ಕೇಂದ್ರಗಳಿಗೆ ಭೇಟಿ ನೀಡಿ, ಸಂತ್ರಸ್ಥರೊಂದಿಗೆ ಮಾತುಕತೆ ನಡೆಸಿ, ಸಮಸ್ಯೆಗಳನ್ನು ಆಲಿಸಿ, ಸಂತ್ರಸ್ತರಿಗೆ ನಾವು ನಿಮ್ಮೊಂದಿಗೆ ಇರುತ್ತೇವೆ ಎಂದು ಧೈರ್ಯ ಹೇಳಿದ್ದಾರೆ..

ಈ ಭೇಟಿಯ ಸಂದರ್ಭದಲ್ಲಿ ಶಾಸಕರ ಆಪ್ತ ಸಹಾಯಕ ಅಬ್ದುಲ್ ಮಿರ್ಜಾನಾಯಕ, ಸ್ಥಳೀಯ ಮುಖಂಡರು, ಶಾಸಕರ ಬೆಂಬಲಿಗರು ಸೇರಿದಂತೆ ಹಲವರು ಉಪಸ್ಥಿತರಿದ್ದರು..

ವರದಿ ಪ್ರಕಾಶ್ ಬಸಪ್ಪ ಕುರಗುಂದ..