ಪ್ರವಾಹ ವೀಕ್ಷಿಸಿ, ಸಂತ್ರಸ್ತರಿಗೆ ಧೈರ್ಯ ತುಂಬಲು ಬೆಳಗಾವಿಗೆ ಆಗಮಿಸಿದ್ದೇನೆ..
ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ..
ಸಿಎಂ ಸಿದ್ದರಾಮಯ್ಯ..
ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಧಾರಾಕಾರ ಮಳೆಯಿಂದ ಸಾಕಷ್ಟು ಹಾನಿಯಾಗಿದ್ದು, ಈ ಹಾನಿಯಾಗಿರುವ ಪ್ರದೇಶಗಳಿಗೆ ಇಂದು ಭೇಟಿ ನೀಡಲೆಂದು ಹಾಗೂ, ಸಂತ್ರಸ್ತರಿಗೆ ಧೈರ್ಯ ತುಂಬಲು ನಾನು ಆಗಮಿಸಿದ್ದೇನೆ. ಅಲ್ಲದೇ ಜಿಲ್ಲೆಯಲ್ಲಿ ಯಾವುದೇ ರೀತಿ ಸಮಸ್ಯೆಯಾಗದಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.
ಜಿಲ್ಲೆಯಲ್ಲಿ ಸಪ್ತ ನದಿಗಳ ಪ್ರವಾಹ ಹಾಗೂ ಧಾರಾಕಾರ ಮಳೆಯಿಂದ ಹಾನಿಯಾಗಿರುವ ಪ್ರದೇಶಗಳಿಗೆ ಭೇಟಿ ನೀಡಲು ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಅವರು ಇದೇ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿ, ಮೈಸೂರು, ಹಾಸನ ಕೊಡಗು ಜಿಲ್ಲೆಗಳಿಗೆ ಭೇಟಿ ನೀಡಿ ಪ್ರವಾಹದ ಸ್ಥಿತಿ ಅವಲೋಕನ ಮಾಡಲಾಗಿದೆ. ಅದರಂತೆ ಬೆಳಗಾವಿ ಜಿಲ್ಲೆಯಲ್ಲಿಯಾಗಿರುವ ಪ್ರವಾಹ ಪರಿಸ್ಥಿತಿ ವೀಕ್ಷಣೆಗೆ ಆಗಮಿಸಿದ್ಧೇನೆ. ಪ್ರವಾಹದಿಂದ ಮೃತಪಟ್ಟ ಕಟುಂಬಸ್ಥರಿಗೆ 24 ಗಂಟೆಗಳಲ್ಲಿ ಪರಿಹಾರ ಒದಗಿಸುವ ಕಾರ್ಯ ಸರ್ಕಾರ ಮಾಡುತ್ತಿದೆ. ಪ್ರವಾಹದಿಂದ ಹದಗೆಟ್ಟ ರಸ್ತೆಗಳನ್ನು ಮಳೆ ನಿಂತ ನಂತರ ದುರಸ್ತಿ ಕಾರ್ಯ ಮಾಡಿ ಸಾವರ್ಜನಿಕರಿಗೆ ಸಂಚಾರಕ್ಕೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಅಂಗನವಾಡಿಗಳಿಗೆ 1 ವಾರ ರಜೆ ಘೋಷಣೆ: ಜಿಲ್ಲೆಯಲ್ಲಿ 45 ದಿನಗಳಿಂದ ನಿರಂತರ ಮಳೆ ಸುರಿಯುತ್ತಿರುವುದರಿಂದ ಮಕ್ಕಳಿಗೆ ಯಾವುದೇ ರೀತಿ ತೊಂದರೆಯಾಗಬಾರದೆಂಬ ಉದ್ದೇಶದಿಂದ ಜಿಲ್ಲೆಯ ಎಲ್ಲ ಅಂಗನವಾಡಿಗಳಿಗೆ 1 ವಾರ ರಜೆ ಘೋಷಿಸಲು ಆದೇಶಿಸಲಾಗಿದೆ. ಮುಂದಿನ ವಾರ ಇನ್ನು ಹೆಚ್ಚು ಮಳೆ ಆಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸುಚಣೆ ನೀಡಿದೆ. ಆದರಿಂದ ಕಂದಾಯ ಇಲಾಖೆ, ಅರಣ್ಯ ಇಲಾಖೆ, ನೀರಾವರಿ ಇಲಾಖೆ ಹಾಗೂ ಇಂಧನ ಇಲಾಖೆಯ ಇಲಾಖೆಯ ಎಲ್ಲ ಅಧಿಕಾರಿಗಳು ಅಲರ್ಟ್ ಇರವಂತೆ ಸೂಚಿಸಿದ್ದೇನೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಶಾಸಕರಾದ ರಾಜು ( ಆಸೀಪ್) ಸೇಠ್, ಬಾಬಾ ಸಾಹೇಬ್ ಪಾಟೀಲ್, ವಿಶ್ವಾಸ ವೈದ್ಯ, ಮಹಾಂತೇಶ ಕೌಜಲಗಿ, ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ, ಬೂಡಾ ಅಧ್ಯಕ್ಷ ಲಕ್ಷಣರಾವ್ ಚಿಂಗಳೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿದಂತೆ ಇತರರು ಇದ್ದರು.
ವರದಿ ಪ್ರಕಾಶ್ ಬಸಪ್ಪ ಕುರಗುಂದ..