ಸ್ವಾತಂತ್ರ್ಯ ಹೋರಾಟಗಾರರನ್ನು ಸನ್ಮಾನಿಸಿದ ಬೆಳಗಾವಿ ಜಿಲ್ಲೆಯ ಜಿಲ್ಲಾಧಿಕಾರಿ ಮೊಹಮ್ಮದ ರೋಶನ್..
ಕ್ವಿಟ್ ಇಂಡಿಯಾ ಚಳುವಳಿಯ ವರ್ಷಾಚರಣೆ ಅಂಗವಾಗಿ ಸನ್ಮಾನ..
ಬೆಳಗಾವಿ : ಶುಕ್ರವಾರ ದಿನಾಂಕ 09/08/ 2024ರಂದು ಕ್ವಿಟ್ ಇಂಡಿಯಾ ಚಳುವಳಿಯ ವರ್ಷಾಚರಣೆಯ ಅಂಗವಾಗಿ ಬೆಳಗಾವಿಯ ಸ್ವಾತಂತ್ರ್ಯ ಹೋರಾಟಗಾರರಾದ ರಾಜೇಂದ್ರ ಕಲಘಟಗಿ ಅವರನ್ನು ಸನ್ಮಾನಿಸಲಾಗಿದೆ..
ಜಿಲ್ಲಾಧಿಕಾರಿಗಳು ಸ್ವತಂತ್ರ ಹೋರಾಟಗಾರರ ಸ್ವಗೃಹಕ್ಕೆ ತೆರಳಿ, ಜಿಲ್ಲಾಡಳಿತದ ವತಿಯಿಂದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಸನ್ಮಾನಿಸಿ, ಗೌರವಿಸಿದ್ದಾರೆ..
ತಹಶೀಲ್ದಾರ ಬಸವರಾಜ ನಾಗರಾಳ, ಕಂದಾಯ ಇಲಾಖೆ ಇತರ ಸಿಬ್ಬಂದಿಗಳು, ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ವರದಿ ಪ್ರಕಾಶ್ ಬಸಪ್ಪ ಕುರಗುಂದ..