ನಗರ ಪೊಲೀಸ್ ಸಿಬ್ಬಂದಿಗಳಿಗೆ ಹೆಲ್ಮೆಟ್ ವಿತರಿಸಿದ ಸಚಿವ ಸತೀಶ್ ಜಾರಕಿಹೊಳಿ..
ಬೆಳಗಾವಿ : ಸ್ವಾತಂತ್ರ್ಯ ದಿನದ ಅಂಗವಾಗಿ ಸುರಕ್ಷಿತ ಚಾಲನೆಯ ದೃಷ್ಟಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಪೊಲೀಸ್ ಸಿಬ್ಬಂದಿಗೆ ಹೆಲ್ಮೆಟ್ ಗಳನ್ನು ವಿತರಿಸಿದರು.
ಈ ಸಂದರ್ಭದಲ್ಲಿ ಶಾಸಕರಾದ ಆಸಿಫ್(ರಾಜು) ಸೇಠ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಆಯುಕ್ತರಾದ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ, ಡಿಸಿಪಿ ರೋಹನ್ ಜಗದೀಶ್ ಮತ್ತಿತರರು ಉಪಸ್ಥಿತರಿದ್ದರು.

ಇದಾದ ಬಳಿಕ ಪೊಲೀಸ್ ಬೈಕ್ ರ‌್ಯಾಲಿಗೆ ಸಚಿವ ಸತೀಶ ಜಾರಕಿಹೊಳಿ ಅವರು ಚಾಲನೆ ನೀಡಿ, ತಾವು ಕೂಡಾ ಇತರ ಗಣ್ಯರೊಂದಿಗೆ ಬೈಕ್ ರ್ಯಾಲಿಯಲ್ಲಿ ಸಿಟಿ ರೌoಡ್ ಹಾಕಿದ್ದಾರೆ..
ವರದಿ ಪ್ರಕಾಶ ಬಸಪ್ಪ ಕುರಗುಂದ..