ಶಿಕ್ಷಣದಿಂದ ಅಂತರಾಷ್ಟ್ರೀಯ ಮಟ್ಟದವರೆಗೆ ಸಾಧನೆ ಮಾಡಬಹುದು..

ಶಿಕ್ಷಣದಿಂದ ಅಂತರಾಷ್ಟ್ರೀಯ ಮಟ್ಟದವರೆಗೆ ಸಾಧನೆ ಮಾಡಬಹುದು..

ಅಗಸಗೆ ಪ್ರೌಢಶಾಲಾ ‌ಸಂಸತ್ತು ಹಾಗೂ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಅಲ್ಲಮಪ್ರಭುಶ್ರೀ ಅಭಿಮತ..

ಬೆಳಗಾವಿ : ವಿದ್ಯಾರ್ಥಿಗಳು ಉತ್ತಮ‌ ಗುಣಮಟ್ಟದ ಶಿಕ್ಷಣ ಪಡೆದರೆ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದವರೆಗೂ ಸಾಧನೆ ಮಾಡಬಹುದು ಎಂದು ನಾಗನೂರು ರುದ್ರಾಕ್ಷಿ ಮಠದ ಅಲ್ಲಮಪ್ರಭು ಶ್ರೀಗಳು ಅಭಿಪ್ರಾಯ ಪಟ್ಟರು.

ಬೆಳಗಾವಿ ತಾಲೂಕಿನ ಅಗಸಗೆಯಯಲ್ಲಿ ಬುಧವಾರ ಶ್ರೀ ಸಿದ್ದರಾಮೇಶ್ವರ ಶಿಕ್ಷಣ ಸಂಸ್ಥೆಯ ಶ್ರೀಮತಿ ಲೀಲಾವತಿ ವೆಂಕಟೇಶ ಕರಗುಪ್ಪಿಕರ ಪ್ರೌಢಶಾಲೆಯ 2024 25 ನೇ ಸಾಲಿನ ಸಹಪಠ್ಯ ಚಟುವಟಿಕೆಗಳ ಶಾಲಾ ಸಂಸತ್ತು ಹಾಗೂ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದ ದಿವ್ಯಸಾನಿಧ್ಯ ವಹಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ಮಕ್ಕಳಲ್ಲಿ ಒಳ್ಳೆಯ ಪ್ರತಿಭೆಗಳು ಇರುತ್ತವೆ, ಶಿಕ್ಷಣ‌ ಪಡೆಯುವುದರ ಜೊತೆಗೆ ವಿದ್ಯಾರ್ಥಿಗಳು ತಮ್ಮಲ್ಲಿರುವ ಪ್ರತಿಭೆಗಳನ್ನು ತೋರಿಸಬೇಕು. ಇದು ನಿಮಗೆ‌‌ ಉತ್ತಮ ವೇದಿಕೆ, ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅಲ್ಲಮಪ್ರಭು ಶ್ರೀಗಳು ‌ಸಲಹೆ ನೀಡಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ರಾಣಿ ಚೆನ್ನಮ್ಮ ವಿವಿಯ ಪ್ರಾಧ್ಯಾಪಕ ಡಾ.ಎಂ.ಸಿ ಯರಿಸ್ವಾಮಿ ಮಾತನಾಡಿ, ವಿದ್ಯಾರ್ಥಿ ‌ಜೀವನದಿಂದಲೇ ನಾಯಕತ್ವ ಗುಣವನ್ನು ಅಳವಡಿಸಿಕೊಳ್ಳಬೇಕು. ದೇಶದ ಆಗು ಹೋಗುಗಳ ಬಗ್ಗೆ ಮಾಹಿತಿ ಕಲೆಹಾಕಿ ಭವಿಷ್ಯದಲ್ಲಿ ನೀವು ಉತ್ತಮ ಆಡಳಿತಗಾರರಾಗಬೇಕು, ಯಾವೂದೇ ದುಷ್ಚಟಗಳಿಗೆ‌ ವಿದ್ಯಾರ್ಥಿಗಳು ಬಲಿಯಾಗಬಾರದು ಎಂದು ಕಿವಿ ಮಾತು ಹೇಳಿದರು.

ಸ್ಥಾನಿಕ ಆಡಳಿತ ಮಂಡಳಿ‌
ಅಧ್ಯಕ್ಷ ಅಮೃತ ಮುದ್ದೆನ್ನವರ ಅಧ್ಯಕ್ಷತೆ ವಹಿಸಿದ್ದರು, ಸಂಸ್ಥೆಯ ಕಾರ್ಯದರ್ಶಿ ಕೆ.ಬಿ ಹಿರೇಮಠ, ಮುಖ್ಯೋಪಾಧ್ಯಾಯ ಕೆ.ಶಿ ಶಿವಕುಮಾರ, ಪ್ರಾಚಾರ್ಯ ನಾಗನಗೌಡ ಪಾಟೀಲ, ಶಾಲಾ ಆಡಳಿತ ಮಂಡಳಿಯ ಸರ್ವ ಸದಸ್ಯರು, ಶಿಕ್ಷಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

10ನೇ ತರಗತಿ ವಿದ್ಯಾರ್ಥಿನಿ ಕರುಣಾ ನಾಯಕ ನಿರೂಪಿಸಿದರೆ, ಶಿಕ್ಷಕ ಪ್ರಕಾಶ ಪಾಯಣ್ಣವರ ವಂದಿಸಿದರು.

ವರದಿ ಪ್ರಕಾಶ್ ಬಸಪ್ಪ ಕುರಗುಂದ..