ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾಪಂ ಆಯ್ಕೆ ಪ್ರಕ್ರಿಯೆ..

ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾಪಂ ಆಯ್ಕೆ ಪ್ರಕ್ರಿಯೆ..

ಜಿಪಂ ಮುಖ್ಯ ಲೆಕ್ಕಾಧಿಕಾರಿಗಳಿಂದ ಪರಿಶೀಲನಾ ಕಾರ್ಯ..

ಬೆಳಗಾವಿ : ಹುಕ್ಕೇರಿ ತಾಲೂಕಿನಲ್ಲಿ 2023- 24ನೇ ಸಾಲಿಗೆ ಗಾಂಧಿ ಗ್ರಾಮ ಪುರಸ್ಕಾರಕ್ಕೆ ಗ್ರಾಮ ಪಂಚಾಯಿತಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದ್ದು ಇದರ ಸಲುವಾಗಿ ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗಳಾದ ಪರಶುರಾಮ ದುಡಗುಂಟಿ ಅವರು ತಾಲೂಕಿಗೆ ಬೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ..

ತಾಲೂಕಿನ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿದ ಅಧಿಕಾರಿ ಮತ್ತವರ ತಂಡ, ಹುಕ್ಕೇರಿ ತಾಲೂಕಿನ 52 ಗ್ರಾಮ ಪಂಚಾಯತಿಗಳಲ್ಲಿ ಪರಿಶೀಲನೆ ನಡೆಸಿ ಅದರಲ್ಲಿ 5 ಗ್ರಾಮ್ ಪಂಚಾಯ್ತಿಗಳನ್ನು ಆಯ್ಕೆ ಮಾಡುವ ಪ್ರಕ್ರಿಯೆ ಚಾಲ್ತಿಯಲ್ಲಿದೆ..

ಹುಕ್ಕೇರಿ ತಾಲೂಕಿನ ಗ್ರಾಮ ಪಂಚಾಯತಿಗಳಾದ ಯಮಕನಮರಡಿ, ಸಲಾಂವಾಡಿ, ಕೋನ್ಕೇರಿ, ಬೆಳವಿ ಹಾಗೂ ಹೊಸಪೇಟ್ ಗ್ರಾಮ ಪಂಚಾಯತಿಗಳಿಗೆ ಭೇಟಿ ನೀಡಿ ಗಾಂಧಿ ಗ್ರಾಮ ಪುರಸ್ಕಾರದ ಬಗ್ಗೆ ಸ್ಥಳ ಪರಿಶೀಲನೆ ಹಾಗೂ ಅವಶ್ಯಕ ದಾಖಲೆಗಳನ್ನು ಪರಿಶೀಲಿಸಲಾಗಿದ್ದು, ಅಲ್ಲಿನ ಕುಂದು ಕೊರತೆಗಳ ಬಗ್ಗೆ ವಿಚಾರಿಸಿ ಸ್ವಚ್ಛತೆ ಕಾಪಾಡುವಂತೆ ಸ್ಥಳೀಯರಿಗೆ ಹಾಗೂ ಅಧಿಕಾರಿಗಳಿಗೆ ಸೂಚಿಸಲಾಗಿದೆ..

ಆಯ್ಕೆಯಾದ ಐದು ಗ್ರಾಮ ಪಂಚಾಯತಿಗಳಲ್ಲಿ, ಆಯ್ಕೆ ಪ್ರಕ್ರಿಯೆಯಲ್ಲಿಯ ಪೂರಕ ದಾಖಲೆಗಳಲ್ಲಿ, ಊರಿನ ಸ್ವಚ್ಛತೆಯಲ್ಲಿ ಮತ್ತು ಇತರೆ ಎಲ್ಲಾ ಕುಂದುಕೊರತೆಗಳು ಇಲ್ಲದೇ, ಸುಧಾರಣೆಯಲ್ಲಿ ಮುಂಚೂಣಿಯಲ್ಲಿರುವಂತಹ ಗ್ರಾಮ ಪಂಚಾಯಿತಿಯನ್ನು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆ ಮಾಡುವ ನಿಬಂಧನೆಗಳಿವೆ..

ಸರ್ಕಾರದ ನಿಯಮಗಳಂತೆಯೇ ಅದೇ ಪ್ರಕಾರದಲ್ಲಿ ಜಿಲ್ಹಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗಳು ತಮ್ಮ ಪರಿಶೀಲನೆಯನ್ನು ನಡೆಸಿದ್ದು, ಉತ್ತಮ ಆಡಳಿತ ಹೊಂದಿದ ಗ್ರಾಮ ಪಂಚಾಯತಿಗಳು ಗಾಂಧಿ ಗ್ರಾಮ ಪುರಸ್ಕಾರಕ್ಕೆ ಆಯ್ಕೆಯಾಗಲಿ ಎಂಬುದು ಎಲ್ಲರ ಆಶಯವಾಗಿದೆ..

ವರದಿ ಪ್ರಕಾಶ ಬಸಪ್ಪ ಕುರಗುಂದ..