ಹಿಂದುಳಿದ ವರ್ಗಗಳ ಬಾಲಕಿಯರ ವಸತಿ ನಿಲಯಕ್ಕೆ ಉಸ್ತುವಾರಿ ಕಾರ್ಯದರ್ಶಿಗಳ ಬೇಟಿ..

ಹಿಂದುಳಿದ ವರ್ಗಗಳ ಬಾಲಕಿಯರ ವಸತಿ ನಿಲಯಕ್ಕೆ ಉಸ್ತುವಾರಿ ಕಾರ್ಯದರ್ಶಿಗಳ ಬೇಟಿ..

ವಿದ್ಯಾರ್ಥಿನಿಗಳೊಂದಿಗೆ ಚರ್ಚೆ ನಡೆಸಿದ ಉಸ್ತುವಾರಿ ಕಾರ್ಯದರ್ಶಿಗಳು..

ಬೆಳಗಾವಿ : ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ವಿಪುಲ್ ಬನ್ಸಾಲ್ ಅವರು ಶನಿವಾರ(ಅ.19) ಬೆಳಗಾವಿ ನಗರದ ಕುಮಾರಸ್ವಾಮಿ ಬಡಾವಣೆಯಲ್ಲಿರುವ ಹಿಂದುಳಿದ ವರ್ಗಗಳ ಇಲಾಖೆಯ ಮೆಟ್ರಿಕ್ ನಂತರದ‌ ಬಾಲಕಿಯರ‌ ವಸತಿನಿಲಯಕ್ಕೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ವಸತಿನಿಲಯದ ಸೌಲಭ್ಯಗಳ ಕುರಿತು ವಿದ್ಯಾರ್ಥಿನಿಯರ ಜತೆ ಚರ್ಚಿಸಿದ್ದು ವಿದ್ಯಾರ್ಥಿನಿಗಳಿಂದ ಹಲವು ಮಾಹಿತಿ ಪಡೆದುಕೊಂಡಿದ್ದಾರೆ, ವಸತಿ ನಿಲಯದ ಸೌಲಭ್ಯಗಳ ಬಗ್ಗೆ ಉತ್ತಮ ಪ್ರತಿಕ್ರಿಯೆ ನೀಡಿದ ವಿದ್ಯಾರ್ಥಿನಿಗಳು, ಅಧಿಕಾರಿಗಳು ಹಾಗೂ ನಿಲಯಪಾಲಕರ ಕಾರ್ಯ ಉತ್ತಮವಿದೆ ಎಂದಿದ್ದಾರೆ..

ಈ ವೇಳೆ ಪ್ರೋಬೇಷನರಿ ಐ‌.ಎ.ಎಸ್. ಅಧಿಕಾರಿ ದಿನೇಶ್ ಕುಮಾರ್, ಜಿಲ್ಲಾ ಪಂಚಾಯತಿ ಮುಖ್ಯ ಯೋಜನಾಧಿಕಾರಿ ಗಂಗಾಧರ್ ದಿವಟರ, ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿ ಶಿವಪ್ರಿಯಾ ಕಡೇಚೂರ ಮತ್ತಿತರರು ಉಪಸ್ಥಿತರಿದ್ದರು.

ವರದಿ ಪ್ರಕಾಶ ಕುರಗುಂದ..