ರಾಜ್ಯೋತ್ಸವದಂದು ಕರಾಳ ದಿನಾಚರಣೆಗೆ ಅನುಮತಿ ನೀಡಬಾರದು..

ರಾಜ್ಯೋತ್ಸವದಂದು ಕರಾಳ ದಿನಾಚರಣೆಗೆ ಅನುಮತಿ ನೀಡಬಾರದು..

ಸರ್ಕಾರ ಹಾಗೂ ಪೊಲೀಸ್ ಇಲಾಖೆ ಕನ್ನಡಿಗರ ಪರವಾಗಿ ಇರಬೇಕು..

ದೀಪಕ ಬ ಗುಡಗನಟ್ಟಿ, ಜಿಲ್ಲಾಧ್ಯಕ್ಷರು ಕರವೇ ಬೆಳಗಾವಿ..

ಬೆಳಗಾವಿ : ನವೆಂಬರ್ ೧ ರಂದು ಕರ್ನಾಟಕ ರಾಜ್ಯೋತ್ಸವದ ದಿನ ಬೆಳಗಾವಿ ಸೇರಿದಂತೆ ರಾಜ್ಯಾದ್ಯಂತ ಕನ್ನಡದ ಹಬ್ಬವನ್ನು ಆಚರಿಸುವ ಸಂದರ್ಭದಲ್ಲಿ ಬೆಳಗಾವಿಯಲ್ಲಿ ನಾಡದ್ರೋಹಿ ಎಂಈಎಸ್ ಕರಾಳ ದಿನಾಚರಣೆ ಆಚರಿಸುತ್ತಿದೆ. ಕನ್ನಡದ ನೆಲದಲ್ಲಿ ಕನ್ನಡಿಗರಿಗೆ ದ್ರೋಹ ಬಗೆಯುವ ಕರಾಳ ದಿನಾಚರಣೆಗೆ ಈ ವರ್ಷ ಯಾವುದೇ ಕಾರಣಕ್ಕೂ ಬೆಳಗಾವಿ ನಗರ ಪೋಲೀಸ್ ಇಲಾಖೆಯು ಅನುಮತಿ ನೀಡಬಾರದು.

ಅನುಮತಿ ನೀಡುವದಿಲ್ಲ ಎಂದು ಸುಳ್ಳು ಹೇಳಿ ಪೋಲೀಸ್ ಇಲಾಖೆಯು ಮದ್ಯರಾತ್ರಿ ಅನುಮತಿ ನೀಡುವ ಮೂಲಕ ಕನ್ನಡಿಗರಿಗೆ ಅನ್ಯಾಯ ಮಾಡುತ್ತಾ ಬಂದಿರುತ್ತದೆ.
ಅದೇ ರೀತಿ ಈ ಬಾರಿ ಯಾವುದೇ ಕಾರಣಕ್ಕೂ ಅನುಮತಿ ನೀಡಬಾರದು.

ಈ ಕುರಿತು ನಾವು ರಾಜ್ಯದ ಗೃಹ ಮಂತ್ರಿಗಳಿಗೂ ಮತ್ತು ಮುಖ್ಯಮಂತ್ರಿಗಳಿಗೂ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸುತ್ತೇವೆ. ಕನ್ನಡಿಗರ ಮನವಿಯನ್ನು ದಿಕ್ಕರಿಸಿದರೆ ಸರ್ಕಾರದ ವಿರುದ್ಧ ಮತ್ತು ಪೋಲೀಸ್ ಇಲಾಖೆಯ ಕನ್ನಡ ವಿರೋಧಿ ಧೋರಣೆಯ ವಿರುದ್ದ ಕರವೇ ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತದೆ, ಸರ್ಕಾರ ಕನ್ನಡಿಗರ ಪರವಾಗಿ ನಿಲ್ಲಬೇಕು ಎಂದು ಈ ಮೂಲಕ ತಿಳಿಸುತ್ತೇವೆ, ರಾಜ್ತೋತ್ಸವದ ದಿನದಂದು ಕರಾಳ ದಿನಾಚರಣೆ ಮಾಡುತ್ತೇವೆ ಎಂದು ತಮ್ಮ ಬಳಿ ಬರುವ ಎಂಈಎಸ್ ನಾಯಕರನ್ನು ರಾಜ್ಯದಿಂದ ಗಡಿಪಾರು ಮಾಡಬೇಕು.

ಅವರನ್ನು ಮುಂಜಾಗ್ರತವಾಗಿ ಬಂಧಿಸುವ ಮೂಲಕ ಕನ್ನಡದ ನೆಲದಲ್ಲಿ ಕನ್ನಡದ ಹಿತ ಕಾಯಬೇಕೆಂದು ಈ ಮೂಲಕ ತಮ್ಮಲ್ಲಿ ಕಳಕಳಿಯ ವಿನಂತಿಸಿಕೊಳ್ಳುತ್ತೇವೆ ಎಂಬ ಮನವಿಯನ್ನು ಕರವೇ ಬೆಳಗಾವಿ ಜಿಲ್ಲಾಧ್ಯಕ್ಷರಾದ ದೀಪಕ ಗುಡಗನಟ್ಟಿ ಮನವಿ ಮಾಡಿಕೊಂಡಿದ್ದಾರೆ..

ಈ ಸಂದರ್ಭದಲ್ಲಿ ಸುರೇಶ ಗವನ್ನವರ ರಾಜ್ಯ ಸಂಚಾಲಕರು, ಗಣೇಶ ರೋಕಡೆ, ಜಿಲ್ಲಾ ಉಪಾಧ್ಯಕ್ಷರು , ಧಶರಥ ಬನೋಶಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಸಂಘಟನೆಯ ಕಾರ್ಯಕರ್ತರು ಉಪಸ್ಥಿತರಿದ್ದರು..

ವರದಿ ಪ್ರಕಾಶ ಬಸಪ್ಪ ಕುರಗುಂದ..