ಕರ್ನಾಟಕ ರಾಜ್ಯೋತ್ಸವದ ಶುಭಾಶಯ ಕೋರಿದ ಬೆಳಗಾವಿ ಉಸ್ತುವಾರಿ ಸಚಿವರು..
ಸಚಿವರಿಂದ ಬೆಳಗಾವಿಯಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿ ಅನಾವರಣ..
ಬೆಳಗಾವಿ : ನವೆಂಬರ್ 1ರ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಸತೀಶ್ ಜಾರಕಿಹೊಳಿ
ಮಾನ್ಯ ಲೋಕೋಪಯೋಗಿ ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರು
69 ನೇ ಕನ್ನಡ ರಾಜ್ಯೋತ್ಸವದ ಸಂದೇಶ ಹಾಗೂ ಶುಭಾಶಯ ಕೋರಿದ್ದಾರೆ..
ಬೆಳಗಾವಿ ಜಿಲ್ಲೆಯ ಮಹಾಜನಗಳೇ,
ಎಲ್ಲರಿಗೂ 69ನೇ ಕರ್ನಾಟಕ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು ಎಂಬ ಶುಭಾಶಯದೊಂದಿಗೆ ಮಾತು ಆರಂಭಿಸಿದ ಸಚಿವರು,
ಕರ್ನಾಟಕ ರಾಜ್ಯೋತ್ಸವದ ಇಂದಿನ ಸಂಭ್ರಮದಲ್ಲಿ ಭಾಗಿಯಾಗಿರುವ ಬೆಳಗಾವಿ ಜಿಲ್ಲೆಯ ಹಿರಿಯ ಜೀವಿಗಳಿಗೆ, ಕರ್ನಾಟಕದ ಏಕೀಕರಣಕ್ಕೆ ದುಡಿದ ಮಹನೀಯರಿಗೆ, ವಿದ್ವಾಂಸರು, ಕವಿ-ಸಾಹಿತಿಗಳಿಗೆ, ಚಿಂತಕರು, ಶಾಸಕರು, ಸಂಸದರು ಹಾಗೂ ಎಲ್ಲ ಜನಪ್ರತಿನಿಧಿಗಳು, ಅಧಿಕಾರಿಗಳು, ಸಹೋದರ-ಸಹೋದರಿಯರು ಮತ್ತು ಮಾಧ್ಯಮದ ಸ್ನೇಹಿತರಿಗೆ ರಾಜ್ಯೋತ್ಸವದ ಶುಭಾಶಯಗಳು.

ನಂತರ ಸಚಿವರು ಜಿಲ್ಲಾಧಿಕಾರಿಗಳ ಕಛೇರಿಯ ಆವರಣದಲ್ಲಿ ಹಲ್ಮಿಡಿ ಶಾಸನದ ಪ್ರತಿಕೃತಿಯನ್ನು ಅನಾವರಣಗೊಳಿಸಿದ್ದಾರೆ, ಈ ವೇಳೆ ಜಿಲ್ಲಾಧಿಕಾರಿಗಳಾದ ಮಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಮಾರ್ಬನ್ಯಾಂಗ್, ಜಿಲ್ಲಾ ಪಂಚಾಯತಿ ಸಿಇಒ ರಾಹುಲ ಶಿಂಧೆ, ಪೊಲೀಸ್ ವರಿಷ್ಠಾಧಿಕಾರಿ ಡಾ ಭೀಮಾಶಂಕರ ಗುಳೇದ ಮತ್ತಿತರರು ಉಪಸ್ಥಿತರಿದ್ದರು..