ಬೆಳಗಾವಿಯ ಗಾಂಧಿ ಭವನದಲ್ಲಿ “ಸಾಬೂನು ಮೇಳ”.
ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಸಂಸ್ಥೆಯಿಂದ ಮೇಳದ ಆಯೋಜನೆ..
ಡಿಸೆಂಬರ್ ಹತ್ತರಿಂದ ಹತ್ತು ದಿನಗಳ ಕಾಲ ನಡೆಯುವ ಸಾಬೂನು ಮೇಳ..
ಬೆಳಗಾವಿ : ನಗರದ ಕಾಲೇಜ್ ರಸ್ತೆಯ ಗಾಂಧಿ ಭವನದಲ್ಲಿ ಇದೆ ತಿಂಗಳು 10/12/2024 ರಿಂದ 19/12/2024ರ ವರೆಗೆ ಹತ್ತು ದಿನಗಳ ಕಾಲ “ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಸಂಸ್ಥೆಯಿಂದ” ಸಾಬೂನು ಮೇಳ ನಡೆಯುತ್ತಿದ್ದು ಅದರ ಸದುಪಯೋಗವನ್ನು ನಗರವಾಸಿಗಳು ಪಡೆಯಬೇಕೆಂದು ಸಂಸ್ಥೆಯ ಪ್ರಧಾನ ವ್ಯವಸ್ಥಾಪಕರಾದ ಎಂ ಗಂಗಪ್ಪ ಅವರು ತಿಳಿಸಿದ್ದಾರೆ.
ರವಿವಾರ ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈಗಾಗಲೇ ಸಂಸ್ಥೆಯು ರಾಜ್ಯದ ಪ್ರಮುಖ ನಗರಗಳಲ್ಲಿ “ಸೋಪ್ ಮೇಳ” ಎಂಬ ವಿಭಿನ್ನ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಾ ಬರುತ್ತಿದ್ದು, ಇದೇ ಮಂಗಳವಾರ ದಿನಾಂಕ 10ರಿಂದ ಹತ್ತು ದಿನಗಳ ಕಾಲ ಬೆಳಗಾವಿಯಲ್ಲಿ ಕೂಡಾ ಈ ಮೇಳ ನಡೆಯುತ್ತಿದ್ದು, ಸಂಸ್ಥೆಯ ಸುಮಾರು 48ಕ್ಕೂ ಹೆಚ್ಚು ಉತ್ಕೃಷ್ಟ ದರ್ಜೆಯ ಉತ್ಪನ್ನಗಳ ಮಾರಾಟ ಮತ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿದೆ ಎಂಬ ಮಾಹಿತಿ ನೀಡಿದ್ದಾರೆ..

ಪ್ರತಿ ದಿನ ಬೆಳಿಗ್ಗೆ ಹತ್ತರಿಂದ ರಾತ್ರಿ ಒಂಬತ್ತರ ವರೆಗೆ ಈ ಮೇಳ ನಡೆಯುತ್ತಿದ್ದು, ಗ್ರಾಹಕರು ವಿಶೇಷ ರಿಯಾಯಿತಿ ದರದಲ್ಲಿ ಬೇಕಾದ ಉತ್ಪನ್ನಗಳನ್ನು ಖರೀದಿಸಬಹುದು, ನೈಸರ್ಗಿಕ ಶ್ರೀಗಂಧದ ಎಣ್ಣೆಯಿಂದ ತಯಾರಿಸಿದ ಮೈಸೂರು ಸ್ಯಾಂಡಲ್ ಸಾಬೂನು ವಿಶೇಷವಾಗಿದ್ದು, ಶ್ರೀಗಂಧದ ಎಣ್ಣೆ, ಸಾಬೂನು, ಮಾರ್ಜಕ, ಸೌಂದರ್ಯವರ್ಧಕ, ಅಗರಬತ್ತಿ ಸೇರಿದಂತೆ ಹಲವಾರು ಸಾಮಗ್ರಿಗಳು ಪ್ರದರ್ಶನ ಮತ್ತು ಮಾರಾಟಕ್ಕೆ ಲಭ್ಯವಿದ್ದು, ಬೆಳಗಾವಿಗರು ಇದರ ಸದುಪಯೋಗ ಪಡೆಯಬೇಕೆಂದು ಹೇಳಿದ್ದಾರೆ..
ಈ ಸುದ್ದಿಗೋಷ್ಠಿಯಲ್ಲಿ ಕೆಎಸ್ ಡಿಎಲ್ ಸಂಸ್ಥೆಯ ಮಾರುಕಟ್ಟೆ ಮತ್ತು ಆಡಳಿತದ ಪ್ರಧಾನ ವ್ಯವಸ್ಥಾಪಕರಾದ ಎಂ ಗಂಗಪ್ಪ, ಸಂಸ್ಥೆಯ ಬೆಳಗಾವಿಯ ಪ್ರತಿನಿಧಿ ವಿಜಯ ಹಾಗೂ ಸಂಸ್ಥೆಯ ಇತರ ಪದಾಧಿಕಾರಿಗಳು ಹಾಜರಿದ್ದರು..
ವರದಿ ಪ್ರಕಾಶ ಬಸಪ್ಪ ಕುರಗುಂದ..