ಬೆಳಗಾವಿಯಲ್ಲಿ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ..
ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯಿಂದ ಅದ್ದೂರಿ ಮೇಳದ ಆಯೋಜನೆ..
ಬೆಳಗಾವಿ : ಕರ್ನಾಟಕ ಸರ್ಕಾರ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ದಿನಾಂಕ 26 -12-2024 ರಂದು ಬೆಳಗ್ಗೆ 10.30 ಕ್ಕೆ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ ನಡೆಯಲಿದೆ..
ಮಹಿಳಾ ಸ್ವ ಸಹಾಯ ಗುಂಪುಗಳ ಉತ್ಪನ್ನಗಳ ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳ, ಖಾದಿ ಉತ್ಸವ, ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳವು ಬೆಳಗಾವಿಯ ಸರ್ದಾರ ಹೈಸ್ಕೂಲ್ ಮೈದಾನದಲ್ಲಿ ಉದ್ಘಾಟನೆಯಾಗಲಿದೆ.
ಮೂರು ದಿನಗಳ ಕಾಲ ನಡೆಯುವ ಈ ಮೇಳವನ್ನು ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ, ಲೋಕೊಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ , ವೈದ್ಯಕೀಯ ಸಚಿವರಾದ ಶರಣಪ್ರಕಾಶ ಪಾಟೀಲ್ ಆಗಮಿಸಲಿದ್ದಾರೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳಗಾವಿ ಉತ್ತರ ಶಾಸಕರಾದ ಆಶೀಫ್ ( ರಾಜು) ಸೇಠ ವಹಿಸಲಿದ್ದು, ರಾಜ್ಯ ಸರ್ಕಾರದ ಕೆಲ ಇಲಾಖೆಗಳ ಸಹಯೋಗದಡಿ ಈ ಪ್ರದರ್ಶನ ಮತ್ತು ಮಾರಾಟ ಮೇಳ ಜರುಗಲಿದೆ..