ಭರತನಾಟ್ಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಬೆಳಗಾವಿ ಬಾಲಕಿ.
ಬಿ,ಕೆ, ಮಾಡೆಲ್ ಆಂಗ್ಲ ಮದ್ಯಮ ಪ್ರೌಡಶಾಲೆಯ ವಿದ್ಯಾರ್ಥಿನಿ ವಿಜಯಲಕ್ಷ್ಮಿಯ ಸಾಧನೆ..
ಬೆಳಗಾವಿ : ನಗರದ ಪ್ರತಿಷ್ಠಿತ ಬಿ ಇ ಎಜುಕೇಷನ್ ಸೊಸೈಟಿಯ ಬಿ ಕೆ ಮಾಡೆಲ್ ಆಂಗ್ಲ ಮಾದ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿಜಯಲಕ್ಷ್ಮಿ ರವಿಕುಮಾರ ಪೂಜಾರಿ ಎಂಬ ವಿದ್ಯಾರ್ಥಿನಿಯ ಭರತನಾಟ್ಯ ಸ್ಪರ್ಧೆಯಲ್ಲಿ ಅದ್ಬುತ ಸಾಧನೆ ಮಾಡಿ ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದಾಳೆ.
ಪ್ರಸಕ್ತ ಸಾಲಿನ, ಜನೆವರಿ 10ರಂದು ನಗರದ ಮಹಾಂತ ಭವನದಲ್ಲಿ ಶಿಕ್ಷಣ ಇಲಾಖೆ ಆಯೋಜನೆ ಮಾಡಿದ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭರತನಾಟ್ಯ ವಿಭಾಗದಲ್ಲಿ ಉತ್ತಮ ಪ್ರದರ್ಶನ ನೀಡಿ, ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸುವುದರೊಂದಿಗೆ ರಾಜ್ಯಮಟ್ಟಕ್ಕೆ ಆಯ್ಕೆ ಆಗಿದ್ದು ಹೆಮ್ಮೆಯ ಸಂಗತಿಯಾಗಿದೆ.

ಈ ಪ್ರತಿಭೆ ಹಾಗೂ ಸಾಧನೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕ ವೃಂದ, ವಿಧ್ಯಾರ್ಥಿ ಬಳಗ, ಹಾಗೂ ಪಾಲಕರು ಅಭಿನಂದನೆಗಳನ್ನು ತಿಳಿಸಿದ್ದು, ರಾಜ್ಯಮಟ್ಟದಲ್ಲಿ ಉತ್ತಮ ಪ್ರದರ್ಶನ ನೀಡಿ, ಜಯಶಾಲಿ ಆಗಲಿ ಎಂದು ಶುಭ ಹಾರೈಸಿದ್ದಾರೆ..
ವರದಿ ಪ್ರಕಾಶ ಬಸಪ್ಪ ಕುರಗುಂದ..