ಬೆಳಗಾವಿಯ ಸೂಪರ್ ಸ್ಪೆಷ್ಯಾಲಿಟಿ ಆಸ್ಪತ್ರೆಯಲ್ಲಿ ಹಂತ ಹಂತವಾಗಿ ಆರೋಗ್ಯ ಸೇವೆ ಆರಂಭ..

ಬೆಳಗಾವಿಯ ಸೂಪರ್ ಸ್ಪೆಷ್ಯಾಲಿಟಿ ಆಸ್ಪತ್ರೆಯಲ್ಲಿ ಹಂತ ಹಂತವಾಗಿ ಆರೋಗ್ಯ ಸೇವೆ ಆರಂಭ..

ಜಲಾಶಯದಲ್ಲಿರುವ ಕೈಗಾರಿಕಾ ಉದ್ದೇಶದ ನೀರಿನ ಪ್ರಮಾಣ ಪರಿಶೀಲಿಸಿ ಮುಂದಿನ ಕ್ರಮ.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ..

ಬೆಳಗಾವಿ : ಸೂಪರ್ ಸ್ಪೆಶಾಲಿಟಿ ಆಸ್ಪತ್ರೆ ತಡವಾಗುತ್ತಿದೆ. ಆದ್ದರಿಂದ ಮೊದಲು ಹಂತ ಹಂತವಾಗಿ ಆರೋಗ್ಯ ಸೇವೆ ಆರಂಭಿಸಬೇಕು. ನಂತರದ ದಿನಗಳಲ್ಲಿ ಆಸ್ಪತ್ರೆ ಉದ್ಘಾಟನೆಗೆ ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಸೂಚನೆ ನೀಡಿದರು.

ಶುಕ್ರವಾರ ದಿನಾಂಕ 24/01/2025ರಂದು ನಗರದ ಸುವರ್ಣ ವಿಧಾನ ಸೌಧದಲ್ಲಿ ಜರುಗಿದ ತ್ರೈಮಾಸಿಕ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಜಿಲ್ಲಾಸ್ಪತ್ರೆಯಲ್ಲಿ ಆರಂಭವಾಗಬೇಕಿದ್ದ ಸೂಪರ್ ಸ್ಪೆಶಿಯಾಲಿಸ್ಟ್ ಆಸ್ಪತ್ರೆಯ ಕಾರ್ಯರಂಭದ ಬಗ್ಗೆ ಅದು ಹಂತ ಹಂತವಾಗಿ ವಿವಿಧ ಸೇವೆಗಳನ್ನು ಆರಂಭಿಸುವ ಮೂಲಕ ಜಿಲ್ಲೆಯ ಜನತೆಗೆ ಉತ್ತಮ ಆರೋಗ್ಯ ಸೇವೆಯನ್ನು ನೀಡುವ ನಿಟ್ಟಿನಲ್ಲಿ ಸಾಗುತ್ತದೆ ಎಂದರು..

ಜಿಲ್ಲೆಯ ಜಲಾಶಯಗಳಲ್ಲಿ ಕೈಗಾರಿಕಾ ಉದ್ಧೇಶಕ್ಕೆ ಮೀಸಲಿಟ್ಟಿರುವ ನೀರಿನ ಪ್ರಮಾಣದ ಬಗ್ಗೆ ಸಮಗ್ರ ಮಾಹಿತಿ ಹಾಗೂ ಸರಕಾರದ ಆದೇಶವನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು.

ಕೈಗಾರಿಕೆಗಳ ಸ್ಥಾಪನೆಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಹಾಗೂ ಸಂಬಂಧಿಸಿದ ಇಲಾಖೆಗಳಿಂದ ಅಗತ್ಯ ಸಹಕಾರ ನೀಡಲಾಗುತ್ತಿದೆ.

ಜಿಲ್ಲೆಯಲ್ಲಿ ಸಾಕಷ್ಟು ಸರಕಾರಿ ಜಮೀನು ಲಭ್ಯವಿಲ್ಲದಿರುವುದರಿಂದ ಸದ್ಯಕ್ಕೆ ದೊಡ್ಡ ಪ್ರಮಾಣದಲ್ಲಿ ಜಮೀನು ನೀಡಲು ಸಾಧ್ಯವಾಗುತ್ತಿಲ್ಲ. ಆದರೆ ಖಾಸಗಿ ಜಮೀನು ಖರೀದಿಸಿ ಕೈಗಾರಿಕೆಗಳ ಸ್ಥಾಪನೆಗೆ ಎಲ್ಲ ರೀತಿಯ ನೆರವು ಮತ್ತು ಸೌಲಭ್ಯಗಳನ್ನು ನೀಡಲಾಗುವುದು ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಕೈಗಾರಿಕೋದ್ಯಮಿಗಳಿಗೆ ಉತ್ತೇಜನ ನೀಡಿ ಬೃಹತ್ ಕೈಗಾರಿಕೆಗಳನ್ನು ಆಕರ್ಷಿಸುವ ನಿಟ್ಟಿನಲ್ಲಿ ವಿಸ್ತೃತವಾಗಿ ಚರ್ಚಿಸಲು ಪ್ರತ್ಯೇಕ ಸಭೆಯನ್ನು ನಡೆಸಲಾಗುವುದು ಎಂದರು.

ಇನ್ನು ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ ಮಾತನಾಡಿ
ಬೆಳಗಾವಿ ಸೂಪರ್ ಸ್ಪೆಶಾಲಿಟಿ‌ ಆಸ್ಪತ್ರೆ ಶೀಘ್ರ ಉದ್ಘಾಟನೆಗೊಳಿಸಿ‌ ಸಾರ್ವಜನಿಕರಿಗೆ ಆರೋಗ್ಯ ಸೇವೆ ಒದಗಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ ಒತ್ತಾಯಿಸಿದರು.

ವೈದ್ಯಕೀಯ ಕಾಲೇಜುಗಳ ವ್ಯಾಪ್ತಿಗೆ ಬರುವ ಜಿಲ್ಲಾ ಆಸ್ಪತ್ರೆಗಳ ಆಡಳಿತದಲ್ಲಿ ಜಿಲ್ಲಾಡಳಿತಕ್ಕೆ ಪ್ರಮುಖ ಜವಾಬ್ದಾರಿ ನೀಡಲು ಸರಕಾರದ ಮಟ್ಟದಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚುವರಿಗೆ ಮನವಿ ಮಾಡಿಕೊಂಡರು.

ತಜ್ಞ ವೈದ್ಯರನ್ನು ಕರೆತಂದು ಜನರಿಗೆ ಉತ್ತಮ ಚಿಕಿತ್ಸೆ ನೀಡಲು ಅನುಕೂಲವಾಗಬೇಕಾದರೆ ಸರಕಾರಿ ಕ್ಯಾನ್ಸರ್ ಆಸ್ಪತ್ರೆಯನ್ನು ಬೆಳಗಾವಿ ನಗರದಲ್ಲಿಯೇ ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.
ಶಾಲೆಗಳಿಗೆ ಮೂಲಸೌಕರ್ಯಗಳನ್ನು ಕಾಲಮಿತಿಯಲ್ಲಿ ಒದಗಿಸಬೇಕು ಎಂದು ಪರಿಷತ್ ಸದಸ್ಯ ನಾಗರಾಜ್ ಯಾದವ ಹೇಳಿದರು.
ಉದ್ಯೋಗ ಸೃಷ್ಟಿಗಾಗಿ ಹೆಚ್ಚಿನ ಪ್ರಮಾಣದಲ್ಲಿ ಕೈಗಾರಿಕೆ ಸ್ಥಾಪನೆಗೆ ಅವಕಾಶ ಒದಗಿಸಬೇಕು ಎಂದು ಯಾದವ ಸಲಹೆ ನೀಡಿದರು.