ಪ್ರಾ ಬಿ ಎಸ್ ಗವಿಮಠ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಿಂದ ಪ್ರಶಸ್ತಿ ಪ್ರಧಾನ..

ಪ್ರಾ ಬಿ ಎಸ್ ಗವಿಮಠ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನದಿಂದ ಪ್ರಶಸ್ತಿ ಪ್ರಧಾನ..

2025 ನೇ ಸಾಲಿನ ಸಾಹಿತ್ಯ ಕ್ಷೇತ್ರದ ನಾಲ್ಕು ಸಾಧಕರಿಗೆ ಪ್ರಶಸ್ತಿ ಪ್ರಧಾನ..

ಬೆಳಗಾವಿ : ರವಿವಾರ ದಿನಾಂಕ 16/02//2025 ರ ಮುಂಜಾನೆ 10-30 ಕ್ಕೆ ನಗರದ ಕನ್ನಡ ಭವನದಲ್ಲಿ (ನೆಹರು ನಗರ) ಪ್ರಾ ಬಿ, ಎಸ್, ಗವಿಮಠ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ, ಸಂಕೇಶ್ವರ ಇವರ ವತಿಯಿಂದ ಸಾಹಿತ್ಯ ಸಾಧಕರಿಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಪ್ರತಿಷ್ಠಾನದ ಕಾರ್ಯದರ್ಶಿ ಅಕಬರ ಸನದಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸಾಹಿತ್ಯ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ನಿಡಸೋಸಿ ಸಿದ್ದಸಂಸ್ಥಾನ ಮಠದ ಪೂಜ್ಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಮಹಾಸ್ವಾಮಿಗಳು ವಹಿಸಲಿದ್ದು, ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ ಪ್ರಭಾಕರ ಕೋರೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂಬ ಮಾಹಿತಿ ನೀಡಿದ್ದಾರೆ.

ಪ್ರಾ ಬಿ ಎಸ್ ಗವಿಮಠ ಅವರು ಜನಪ್ರಿಯ ಅಧ್ಯಾಪಕರಾಗಿ, ಲೇಖಕರಾಗಿ, ಕೆಎಲ್ಇ ಇತಿಹಾಸಕಾರರಾಗಿ, 55 ಕೃತಿಗಳನ್ನು ರಚಿಸಿ, ಸಂಪಾದಿಸಿ, ಹಲವು ಸಂಘ ಸಂಸ್ಥೆಗಳ ನಿರ್ದೇಶಕರಾಗಿ, ಸಂಘಟಕರಾಗಿ, ಕರ್ನಾಟಕ ಸರ್ಕಾರದ “ಗಡಿನಾಡ ಚೇತನ” ಪ್ರಶಸ್ತಿಗೆ ಭಾಜನರಾಗಿದ್ದಾರೆ, ಕರ್ನಾಟಕ ನಾಟಕ ಅಕಾಡೆಮಿಯ ಸದಸ್ಯರಾಗಿ ಬೆಳಗಾವಿ ಜಿಲ್ಲೆಯಲ್ಲಿ ರಂಗಭೂಮಿ ಅಭಿವೃದ್ಧಿಗೆ ಶ್ರಮಿಸಿದ್ದಾರೆ.

ಇತ್ತೀಚೆಗೆ ಶ್ರೀಯುತರ ಹೆಸರಿನಲ್ಲಿ ಸಂಕೇಶ್ವರದಲ್ಲಿ ಆಪ್ತಮಿತ್ರರು ಸೇರಿಕೊಂಡು ಬಿ ಎಸ್ ಗವಿಮಠ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನ ಸ್ಥಾಪಿಸಿದ್ದಾರೆ, ಈ ಪ್ರತಿಷ್ಠಾನದ ಮೊದಲ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಬೆಳಗಾವಿ ಜಿಲ್ಲೆಯ ನಾಲ್ಕು ಸಾಧಕ ಸಾಹಿತಿಗಳನ್ನು ಗುರ್ತಿಸಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಡಾ ದಯಾನಂದ ನೂಲಿ, ಇವರು ವೃತ್ತಿಯಿಂದ ವೈದ್ಯರಾಗಿದ್ದು, ಚಿಕ್ಕೋಡಿಯಲ್ಲಿ ಸಾಹಿತ್ಯ ಕೃಷಿ ಮಾಡುತ್ತಿದ್ದು ಶರಣ ಸಾಹಿತ್ಯ ಪ್ರಕಾರಗಳಲ್ಲಿ ಮಹತ್ತರ ಕೊಡುಗೆ ನೀಡಿದ್ದು, “ಶರಣ ಸಾಹಿತ್ಯ ಸಿರಿ” ಪ್ರಶಸ್ತಿಗೆ ಭಾಜನರಾಗಿದ್ದಾರೆ, ಅದೇರೀತಿ ಬೆಳಗಾವಿಯ ಗುರುದೇವ ಹುಲೆಪ್ಪನವರಮಠ ಅವರಿಗೆ “ಸಾಹಿತ್ಯ ಸಿರಿ” ಪ್ರಶಸ್ತಿ, ಸವದತ್ತಿಯ ಝಾಕಿರ್ ನಾಧಾಫ್ ಅವರಿಗೆ “ರಂಗ ಚೇತನ” ಪ್ರಶಸ್ತಿ ಹಾಗೂ ಹುಕ್ಕೇರಿಯ ಸಂತೋಷ ನಾಯಕ “ಕಾವ್ಯಸಿರಿ ದತ್ತಿ” ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಿಳಿಸಿದ್ದಾರೆ.

ವರದಿ ಪ್ರಕಾಶ್ ಬಸಪ್ಪ ಕುರಗುಂದ..