ಸಚಿವ ಸತೀಶ ಜಾರಕಿಹೊಳಿ ಅವರಿಗೆ ಗೌರವ ಡಾಕ್ಟರೇಟ್..

ಸಚಿವ ಸತೀಶ ಜಾರಕಿಹೊಳಿ ಅವರಿಗೆ ಗೌರವ ಡಾಕ್ಟರೇಟ್..

ಸಾಮಾಜಿಕ, ಶೈಕ್ಷಣಿಕ ಹಾಗೂ ರಾಜಕೀಯ ಸೇವೆಗೆ ಸಿಕ್ಕ ಗೌರವ.

ಕರ್ನಾಟಕ ಸ್ಟೇಟ್ ಓಪನ್ ಯೂನಿವರ್ಸಿಟಿ ಮೈಸೂರ ಕಡೆಯಿಂದ ಗೌರವ..

ಬೆಳಗಾವಿ : ಕರ್ನಾಟಕ ರಾಜ್ಯ ಮೈಸೂರು ಮುಕ್ತ ವಿಶ್ವವಿದ್ಯಾನಿಲಯದ 20 ನೇ ವಾರ್ಷಿಕ ಘಟಿಕೋತ್ಸವದಲ್ಲಿ ರಾಜ್ಯದ ಜನಪ್ರಿಯ ಲೋಕೋಪಯೋಗಿ ಸಚಿವ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು ಪ್ರಕಟಿಸಲಾಗಿದೆ.

ಸಚಿವ ಸತೀಶ ಜಾರಕಿಹೊಳಿ ಅವರ ಸುಮಾರು ಮೂವತ್ತು ವರ್ಷಗಳ ರಾಜಕೀಯ, ಸಾಮಾಜಿಕ ಹಾಗೂ ಶೈಕ್ಷಣಿಕ ಸೇವೆಯನ್ನು ಹಾಗೂ ಮಾನವ ಬಂದುತ್ವ ವೇದಿಕೆಗಳಂತಹ ಸಂಘಟನೆಯಿಂದ ಸಾಮಾಜಿಕ ಕಳಕಳಿಯ ಕಾರ್ಯಗಳನ್ನು ಮಾಡುತ್ತಾ ಬಂದಿರುವ ಅವರ ಸೇವೆಯನ್ನು ಗುರ್ತಿಸಿ, ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ..

ರಾಜ್ಯ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಪತಿಗಳು ಅನುಮೋದನೆ ಮಾಡಿದ ಪಟ್ಟಿಯಂತೆ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ, ಐಡಿಯಲ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಇರ್ಪಾನುಲ್ಲಾ ಷರೀಫ್, ಹಾಗೂ ಶರಣ ಬಸವೇಶ್ವರ ವಿದ್ಯಾ ವರ್ಧಕ ಸಂಘದ ಅಧ್ಯಕ್ಷರಾದ ಡಾ ದಾಕ್ಷಾಯಿಣಿ ಅಪ್ಪಾ ಎಂಬ ಮೂರು ಮಹನೀಯರಿಗೆ ಗೌರವ ಡಾಕ್ಟರೇಟ್ ಪ್ರಕಟಿಸಲಾಗಿದೆ..

ವರದಿ ಪ್ರಕಾಶ್ ಬಸಪ್ಪ ಕುರಗುಂದ.