ಗಡಿ ವಿವಾದ ಮುಗಿದು ಹೋದ ಅಧ್ಯಾಯ..

ಗಡಿ ವಿವಾದ ಮುಗಿದು ಹೋದ ಅಧ್ಯಾಯ..

ಭಾಷಾ ವೈಷಮ್ಯ ಮರೆತು, ಅಭಿವೃದ್ಧಿ ದೃಷ್ಟಿಯಿಂದ ಬಾಳಬೇಕು.

ಸಚಿವ ಸತೀಶ ಜಾರಕಿಹೊಳಿ..

ಬೆಳಗಾವಿ : ಕನ್ನಡಪರ ಸಂಘಟನೆಗಳು ಬಂದ ನೀಡಿರುವ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಸತೀಶ್ ಜಾರಕಿಹೊಳಿ ಅವರು ತಮ್ಮ ಹಕ್ಕುಗಳಿಗಾಗಿ ಹೋರಾಟ ಮಾಡುವ ಸ್ವಾತಂತ್ರ್ಯ ಎಲ್ಲರಿಗೂ ಇದೆ, ಆದರೆ ಯಾವುದೇ ಹೋರಾಟ, ಬಂದ್ ಗಳು ಸಾರ್ವಜನಿಕರಿಗೆ ತೊಂದರೆ ಆಗದಂತೆ ಇರಬೇಕು ಎಂದಿದ್ದಾರೆ.

ಗಡಿ ವಿವಾದ ಮುಗಿದು ಹೋದ ಅಧ್ಯಾಯ ಅದನ್ನು ಬೆಳೆಸುವದು ಸರಿಯಲ್ಲ, ಬಹಳ ವರ್ಷಗಳ ಹಿಂದೆ ಬೆಳಗಾವಿಯಲ್ಲಿ ಇದ್ದ ಪರಿಸ್ಥಿತಿ ಈಗ ಇಲ್ಲಾ, ಕನ್ನಡ ಮರಾಠಿ ಎಲ್ಲರೂ ಹೊಂದಾಣಿಕೆಯಿಂದ ಬಾಳುತ್ತಿದ್ದಾರೆ, ಸಣ್ಣ ಪುಟ್ಟ ಸಮಸ್ಯೆಗಳಾದಲ್ಲಿ ಎಲ್ಲರೂ ಸೇರಿ ಸರಿಪಡಿಸಿಕೊಂಡು ಹೋಗಬೇಕು ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದ್ದಾರೆ.

ಶನಿವಾರ ನಗರದ ಕಾಂಗ್ರೆಸ್ ಭವನದಲ್ಲಿ ನಡೆದ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಸಚಿವ ಸತೀಶ ಜಾರಕಿಹೊಳಿ ಅವರು ಗಡಿಭಾಗ ಬೆಳಗಾವಿಯಲ್ಲಿ ಭಾಷಾ ಗೊಂದಲ ಮೊದಲಿಗಿಂತ ಈಗ ಕಡಿಮೆ ಆಗಿದ್ದು, ಭಾಷಾ ಗೊಂದಲ ಸೃಷ್ಟಿಸುವ ಸಂಘಟನೆಗಳನ್ನು ನಿಷೇಧ ಮಾಡುವುದರಿಂದ ಸಮಸ್ಯೆ ನಿವಾರಣೆ ಆಗುವದಿಲ್ಲ, ನಿಷೇಧಿಸಿದರೆ ಮತ್ತೆ ಹೊಸ ಸಂಘಟನೆಗಳು ಹುಟ್ಟುತ್ತವೆ, ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಎಲ್ಲರೂ ಒಂದೇ ಎಂಬ ಭಾವನೆಯಿಂದ ಕೆಲಸ ಮಾಡಬೇಕು ಎಂದಿದ್ದಾರೆ.

ವರದಿ ಪ್ರಕಾಶ್ ಬಸಪ್ಪ ಕುರಗುಂದ.