ಮೋದಿ ಪ್ರಧಾನಿ ಆದ ಮೇಲೆ ದೇಶದ ಭದ್ರತೆಗೆ ಹೆಚ್ಚಿನ ಅಧ್ಯತೆ ನೀಡಿದ್ದಾರೆ..

ಮೋದಿ ಪ್ರಧಾನಿ ಆದ ಮೇಲೆ ದೇಶದ ಭದ್ರತೆಗೆ ಹೆಚ್ಚಿನ ಅಧ್ಯತೆ ನೀಡಿದ್ದಾರೆ..

ಅರವಿಂದ ಬೆಲ್ಲದ, ವಿಧಾನ ಸಭಾ ವಿರೋಧ ಪಕ್ಷದ ಉಪನಾಯಕ..

ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಅವರು ಆಡಳಿತಕ್ಕೆ ಬಂದ ಮೇಲೆ ದೇಶದ ಭದ್ರತೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ ಎಂದು ವಿಧಾನ ಸಭಾ ವಿರೋಧ ಪಕ್ಷದ ಉಪ ನಾಯಕ ಅರವಿಂದ ಬೆಲ್ಲದ ಹೇಳಿದರು.
ಬುಧವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ 11 ವರ್ಷದಲ್ಲಿ ಪ್ರಧಾನಿ ನರೇಂದ್ರ ‌ಮೋದಿ ಅವರು ದೇಶದ ಭದ್ರತೆಗೆ ಹೆಚ್ಚಿನ ಆದ್ಯತೆ ‌ನೀಡಿದ್ದಾರೆ. ಸರ್ಜಿಕಲ್ ಸ್ಟ್ರೈಕ್, ಆಪರೇಷನ್ ಸಿಂಧೂರ್ ನಂಥ ಪ್ತಯೋಗ ಮಾಡಿ ವೈರಿ ರಾಷ್ಟ್ರ ಪಾಕಿಸ್ತಾನದ ಮೇಲೆ ದಾಳಿ ಮಾಡಿಸಿ ದೇಶವನ್ನು ಸುರಕ್ಷತೆ ಮಾಡಿದ್ದಾರೆ ಎಂದರು.

ಕೇವಲ ಶ್ರೀಮಂತರಿಗೆ ಮಾತ್ರ ಇದ್ದ ಗ್ಯಾಸ್ ಸಿಲಿಂಡರ್ ಉಜ್ವಲ ಯೋಜನೆಯಿಂದ ದೇಶದ ಪ್ರತಿಯೊಬ್ಬ ಬಡವರಿಗೂ ಗ್ಯಾಸ್ ಬಳಕೆ ಮಾಡಲು ಅನುಕೂಲ ಮಾಡಿಕೊಟ್ಟಿದ್ದಾರೆ ಎಂದರು.
ಎಲ್ಲರಿಗೂ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವ ಉದ್ದೇಶದಿಂದ ಜಲಜೀವನ್ ಮಿಷನ್ ಯೋಜನೆ ಜಾರಿಗೆ ತಂದು ಪ್ರತಿ ಗ್ರಾಮದ ಮನೆ ಗಳಲ್ಲಿಯೂ ನೀರು ಸರಬರಾಜು ಮಾಡಲಾಗುತ್ತಿದೆ ಎಂದರು.

ದೇಶದಲ್ಲಿ ಸ್ವಚ್ಚ ಭಾರತದ ಕಲ್ಪನೆ ಜಾರಿಗೆ ತಂದು ಇಡೀ ದೇಶದಲ್ಲಿ ಸ್ವಚ್ಚ ಭಾರತದ ಬಗ್ಗೆ ಜಾಗೃತಿ ಮೂಡಿಸಿ ಭಾರತ ಅಭಿವೃದ್ಧಿಯ ಪಥದಲ್ಲಿ ಸಾಗುತ್ತಿದೆ ಎಂದರು.
2014 ರಿಂದ 2024ರ ಅವಧಿಯಲ್ಲಿ ಪ್ರಧಾನಿ ನರೇಂದ್ರ ‌ಮೋದಿ ಸರ್ಕಾರ ರಾಷ್ಟ್ರೀಯ ಹೆದ್ದಾರಿಯ ನಿರ್ಮಾಣ, ಬೆಂಗಳೂರಿನ ಸ್ಯಾಟ್ ಲೈಟ್ ರಿಂಗ್ ರಸ್ತೆ ‌ನಿರ್ಮಾಣಕ್ಕೆ‌ 27 ಸಾವಿರ ಕೋಟಿ ರೂ. ನೀಡಿದೆ. ರೈಲ್ಬೆ ಮಾರ್ಗದ ವಿದ್ಯುತಕರಣ ಮಾಡುವ ಉದ್ದೇಶದಿಂದ ಅಭಿವೃದ್ಧಿ ಕಾಮಗಾರಿ ಆರಂಭವಾಗಿದೆ. ಹೊಸ ರೈಲ್ವೆ ಕಾಮಗಾರಿಗಳು ಪ್ರಾರಂಭವಾಗಿವೆ. ಅಮೃತ್ ಭಾರತ ಯೋಜನೆಯಲ್ಲಿ ರೈಲ್ವೆ ಕಾಮಗಾರಿಯನ್ನು ಕೈಗೊಳ್ಳಲಾಗಿದೆ ಎಂದರು.

ಉಡಾನ್ ವಿಮಾನ ಯೋಜನೆಯಲ್ಲಿ 16 ವಿಮಾನಗಳು ಕರ್ನಾಟಕಕ್ಕೆ ಬಂದಿವೆ. ಬೆಳಗಾವಿ ವಿಮಾನ ನಿಲ್ದಾಣ ಹಾಗೂ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್ ಕಾಮಗಾರಿ ಆರಂಭವಾಗಿದೆ ಎಂದರು.

ವರದಿ ಪ್ರಕಾಶ್ ಬಸಪ್ಪ ಕುರಗುಂದ..