ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘದ ಬೆಳಗಾವಿ ಜಿಲ್ಲಾಧ್ಯಕ್ಷರಾಗಿ ಜಯತೀರ್ಥ ಸವದತ್ತಿ..
ಬೆಳಗಾವಿ : ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘವು ಬೆಳಗಾವಿಯ ನಿವಾಸಿ ಜಯತೀರ್ಥ ಸವದತ್ತಿ ಅವರ ನಿಸ್ವಾರ್ಥ ಸೇವೆ ಹಾಗೂ ಸಮಾಜಮುಖಿ ಕಾರ್ಯಗಳನ್ನು ಗುರುತಿಸಿ, ಕರ್ನಾಟಕ ರಾಜ್ಯದ ಬೆಳಗಾವಿ ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ನೇಮಕ ಮಾಡಿದೆ..
ಜಯತೀರ್ಥ ಸವದತ್ತಿ ಅವರು ಜಿಲ್ಲಾಧ್ಯಕ್ಷರಾಗಿ ಇನ್ನು ಮೂರು ವರ್ಷಗಳ ಕಾಲಾವಧಿಯಲ್ಲಿ ಇರುತ್ತಾರೆ, ಇದರೊಂದಿಗೆ ಬ್ರಾಹ್ಮಣ ಸಮುದಾಯದ ಶ್ರೇಯೋಭಿವೃದ್ಧಿಗೆ ಶ್ರಮಿಸುವ ಮೂಲಕ ಅಖಿಲ ಭಾರತೀಯ ಬ್ರಾಹ್ಮಣ ಮಹಾಸಂಘವನ್ನು ತಮ್ಮ ಸಂಘಟನಾ ಶಕ್ತಿಯ ಮೂಲಕ ಮತ್ತಷ್ಟು ಬಲ ತುಂಬಲಿ ಎಂದು ಸಮುದಾಯದ ಸರ್ವ ಸದಸ್ಯರು ಆಶಿಸಿ, ಎಲ್ಲರೂ ಶುಭಾಶಯಗಳನ್ನು ತಿಳಿಸಿದ್ದಾರೆ..
ವರದಿ ಪ್ರಕಾಶ್ ಬಸಪ್ಪ ಕುರಗುಂದ..