ವಸತಿ ನಿಲಯ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳಿಗಾಗಿ ಎಬಿವಿಪಿ ಪ್ರತಿಭಟನೆ..

ವಸತಿ ನಿಲಯ ವಿದ್ಯಾರ್ಥಿಗಳ ವಿವಿಧ ಬೇಡಿಕೆಗಳಿಗಾಗಿ ಎಬಿವಿಪಿ ಪ್ರತಿಭಟನೆ..

ಬೆಳಗಾವಿ : ವಸತಿ ನಿಲಯಗಳ ವಿದ್ಯಾರ್ಥಿಗಳಿಗೆ ಸರ್ಕಾರದಿಂದ ನೀಡುವ ಕಿಟ್ ಗಳನ್ನ ತಕ್ಷಣವೇ ಎಲ್ಲ ವಿದ್ಯಾರ್ಥಿಗಳಿಗೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಬುಧವಾರ ಎಬಿವಿಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದಾರೆ..

ಪ್ರತಿ ವಿದ್ಯಾರ್ಥಿಗೆ ಊಟಕ್ಕೆ ನೀಡುವ 1850 ರೂ ಹಣವನ್ನು ಸರಕಾರ ಹೆಚ್ಚಳ ಮಾಡಬೇಕು. ರಾಜ್ಯದಲ್ಲಿ ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗ, ಹಿಂದುಳಿದ ವರ್ಗ ಹಾಗೂ ಅಲ್ಪಸಂಖ್ಯಾತ ಇಲಾಖೆಗಳ ವಸತಿ ನಿಲಯಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು ಎಂದು ಒತ್ತಾಯಿಸಿದರು‌.

ಹಾಸ್ಟೆಲಗಳಿಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸಿ ಹಾಸ್ಟೆಲಗಳಿಗೆ ಪ್ರವೇಶಾತಿ ನೀಡಬೇಕು ಎಂಬ ಬೇಡಿಕೆಯೊಂದಿಗೆ
ಬಾಕಿ ಉಳಿದಿರುವ ಹಿಂದಿನ ವರ್ಷದ ವಿದ್ಯಾರ್ಥಿ ವೇತನವನ್ನು ತಕ್ಷಣವೇ ವಿದ್ಯಾರ್ಥಿಗಳ ಖಾತೆಗೆ ಜಮೆ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *