ರೈತರ ಸಮಸ್ಯೆಗೆ ಸ್ಪಂದಿಸಿದ ಬಿಜೆಪಿ ನಾಯಕರು..
ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿ ಕಾರಿದ ಕೇಸರಿ ಪಡೆ..
ಬೆಳಗಾವಿ : ಜಿಲ್ಲೆಯ ಬೈಲಹೊಂಗಲ ತಾಲೂಕಿನ ನೇಸರಗಿ, ನಾಗನೂರ ಹಾಗೂ ಬೆಳಗಾವಿ ತಾಲೂಕಿನ ತಾರಿಹಾಳ ಗ್ರಾಮಗಳಲ್ಲಿ ಮಳೆಯಿಂದ ಹಾನಿಗೊಳಗಾದ ರೈತರ ಜಮೀನುಗಳಿಗೆ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕರವರ ನೇತೃತ್ವದ ಬಿಜೆಪಿ ನಿಯೋಗ ಭೇಟಿ ನೀಡಿ ಬೆಳೆ ಹಾನಿಯ ಪರಿಶೀಲನೆ ನಡೆಸಿ, ರೈತರ ಸಮಸ್ಯೆಗಳನ್ನು ಆಲಿಸಿ ರೈತರಿಗೆ ಧೈರ್ಯ ತುಂಬುವ ಕಾರ್ಯ ಮಾಡಲಾಗಿದೆ.
ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆದ ನೆರೆ ಹಾವಳಿಯ ಕುರಿತು ಯಾವುದೇ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳದೇ, ನಿರ್ಲಕ್ಷ್ಯ ತೋರಿದ ರೈತ ಕಾಳಜಿ ಇಲ್ಲದ ರಾಜ್ಯ ಸರ್ಕಾರ ಇನ್ನೂ ಮುಂದಾದರೂ ತಿದ್ದಿಕೊಳ್ಳಬೇಕು. ಸಂಕಷ್ಟಿತ ಜನರ ಹಾಗೂ ರೈತರ ನೆರವಿಗೆ ಧಾವಿಸಿ ಶೀಘ್ರ ಪರಿಹಾರ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿಯ ನಿಕಟ ಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಿ.ಟಿ.ರವಿ, ವಿಧಾನ ಪರಿಷತ್ ಸದಸ್ಯರಾದ ಎನ್ ರವಿಕುಮಾರ ಜಿಲ್ಲಾ ಅದ್ಯಕ್ಷರಾದ ಸುಭಾಷ್ ಪಾಟೀಲ ಸಂಸದರಾದ ರಮೇಶ ಜಿಗಜಿಣಗಿ, ಮಾಜಿ ಸಚಿವರಾದ ಶಶಿಕಲಾ ಜೊಲ್ಲೆ, ರಮೇಶ ಜಾರಕಿಹೊಳಿ, ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ, ಶಾಸಕರಾದ ಅಭಯ ಪಾಟೀಲ, ದುರ್ಯೋದನ ಐಹೊಳೆ, ಸಿದ್ದು ಸವದಿ, ವಿಠ್ಠಲ ಹಲಗೇಕರ, ಸಂಜಯ ಪಾಟೀಲ, ಧನಂಜಯ ಜಾದವ್, ಮಹಾಂತೇಶ ಕವಟಗಿಮಟ, ಮಹಾಂತೇಶ ದೊಡಗೌಡರ, ವಿಶ್ವನಾಥ ಪಾಟಿಲ್, ಜಗದೀಶ ಮೆಟಗುಡ್, ಅರವಿಂದ ಪಾಟೀಲ, ಪ್ರದೀಪ್ ಪಾಟೀಲ್, ಶ್ರೀಕರ್ ಕುಲಕರ್ಣಿ, ಮಲ್ಲಿಕಾರ್ಜುನ ಮಾದಮ್ಮನವರ, ಮುರಗೇಂದ್ರಗೌಡ ಪಾಟೀಲ, ಹನಮಂತ ಕೊಂಗಾಲಿ, ಚೇತನ ಅಂಗಡಿ, ಪಕ್ಷದ ಪದಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಅಧಿಕಾರಿಗಳು, ಸ್ಥಳೀಯ ಮುಖಂಡರು ಹಾಗೂ ರೈತರು ಉಪಸ್ಥಿತರಿದ್ದರು.