ಕರವೇ ಬೆಳಗಾವಿ ಘಟಕದಿಂದ ಮುಖ್ಯಮಂತ್ರಿಗಳಿಗೆ ಮನವಿ..
ಗಡಿನಾಡಿನ ಕಲ್ಯಾಣಕ್ಕಾಗಿ ಸಿಎಂ ಮುಂದೆ ಕೆಲವು ಬೇಡಿಕೆ ಇಟ್ಟ ಕರವೇ..
ಬೆಳಗಾವಿ : ಜಿಲ್ಲೆಯು ಹದಿನೈದು ತಾಲ್ಲೂಕುಗಳನ್ನು, ಹದಿನೆಂಟು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಭೌಗೋಳಿಕವಾಗಿ ಅತೀ ದೊಡ್ಡ ಜಿಲ್ಲೆಯಾಗಿದ್ದು ಈ ಜಿಲ್ಲೆಯ ಪ್ರಮುಖ ಬೇಡಿಕೆಗಳಿಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಘಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ನೀಡುವ ಮೂಲಕ ವಿನಂತಿಸಿಕೊಂಡಿದೆ..
ಗಡಿನಾಡು ಗುಡಿ ಬೆಳಗಾವಿ ಜಿಲ್ಲೆಯ ವಿವಿಧ ಬೇಡಿಕೆಗಳು..
1) ಬೆಳಗಾವಿಯಲ್ಲಿ ನಡೆಯುವ ರಾಜ್ಯೋತ್ಸವ ರಾಜ್ಯದಲ್ಲಿಯೇ ಅತ್ಯಂತ ಅದ್ದೂರಿಯಾಗಿ ನಡೆಯುವ ಉತ್ಸವವಾಗಿದ್ದು ಬೆಳಗಾವಿ ರಾಜ್ಯೋತ್ಸವಕ್ಕೆ ಪ್ರತಿವರ್ಷ ಎರಡು ಕೋಟಿ ರೂ ಅನುದಾನ ನೀಡಬೇಕು

2) ಬೆಳಗಾವಿ ಜಿಲ್ಲೆಯ ಇಬ್ಬರು ಕನ್ನಡಪರ ಹೋರಾಟಗಾರರಿಗೆ ಪ್ರತಿ ವರ್ಷ ರಾಜ್ಯೋತ್ಸವ ಪ್ರಶಸ್ತಿ ನೀಡಬೇಕು
3) ಕನ್ನಡಪರ ಹೋರಾಟಗಾರರ ಮೇಲೆ ದಾಖಲಾಗಿರುವ ಎಲ್ಲ ಪ್ರಕರಣಗಳನ್ನು ರದ್ದು ಮಾಡಬೇಕು.
4) ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಬೇಕು
5 ) ಬೆಳಗಾವಿ ಜಿಲ್ಲೆ ರಾಜ್ಯದಲ್ಲಿಯೇ ಅತೀ ದೊಡ್ಡ ಜಿಲ್ಲೆಯಾಗಿದ್ದು ಇಲ್ಲಿ 500 ಹಾಸಿಗೆಯ ಹೈಟೆಕ್ ಹೆರಿಗೆ ಆಸ್ಪತ್ರೆ ಮಂಜೂರು ಮಾಡಬೇಕು
6) ಬೆಳಗಾವಿಯಲ್ಲಿ ಉನ್ನತ ವ್ಯಾಸಂಗ ಮಾಡುವ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗೆ ಸುಸಜ್ಜಿತವಾದ ಹೆಚ್ಚುವರಿ ಹಾಸ್ಟೆಲ್ ಗಳನ್ನು ಮಂಜೂರು ಮಾಡಬೇಕು
7) ಬೆಳಗಾವಿ ಜಿಲ್ಲೆಯ ಗಡಿಭಾಗದ ಗ್ರಾಮಗಳ ಕನ್ನಡ ಶಾಲೆಗಳ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಬೇಕು.
8) ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ಧಾಣಕ್ಕೆ ವೀರರಾಣಿ ಕಿತ್ತೂರು ಚನ್ನಮ್ಮಾಜಿಯ ಹೆಸರು ನಾಮಕರಣ ಮಾಡಬೇಕು.
9) ಬೆಳಗಾವಿ ಜಿಲ್ಲೆಯಲ್ಲಿ ಬೃಹತ್ ಕೈಗಾರಿಕೆಗಳ ಸ್ಥಾಪನೆಗೆ ಉದ್ಯಮಿಗಳನ್ನು ಆಕರ್ಷಿಸುವ ಕೈಗಾರಿಕಾ ನೀತಿಯನ್ನು ಜಾರಿಗೊಳಿಸಬೇಕು
10) ಬೆಳಗಾವಿ ಜಿಲ್ಲೆಯಲ್ಲಿ ರಕ್ಷಣಾ ಇಲಾಖೆಯ ಸಾವಿರಾರು ಎಕರೆ ಜಮೀನು ಇದ್ದು ಇಲ್ಲಿ ರಕ್ಷಣಾ ಇಲಾಖೆಯ ( ಡಿಫೆನ್ಸ್ ಬೇಸ್ಡ್) ಕಾರ್ಖಾನೆಗಳನ್ನು ಸ್ಥಾಪಿಸುವಂತೆ ಮನವಿ ಮಾಡಿಕೊಳ್ಳಲು ಕೇಂದ್ರ ಸರ್ಕಾರದ ಬಳಿ ರಾಜ್ಯದಿಂದ ನಿಯೋಗ ಹೋಗಬೇಕು..

ಸನ್ಮಾನ್ಯ ಮುಖ್ಯಮಂತ್ರಿಗಳೇ,, ಬೆಳಗಾವಿ ಜಿಲ್ಲೆಯ ಈ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಎಂದು ಬೆಳಗಾವಿ ಜಿಲ್ಲೆಯ ಸಮಸ್ತ ಜನತೆಯ ಪರವಾಗಿ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇವೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರಾದ ದೀಪಕ್ ಗುಡಗನಟ್ಟಿ ಮನವಿ ಮಾಡಿಕೊಂಡಿದೆ..