ಬಿಜೆಪಿ ದ್ವೇಷದ ರಾಜಕಾರಣದಿಂದ ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸ್ ಹಾಕುತ್ತಿದೆ..

ಬಿಜೆಪಿ ದ್ವೇಷದ ರಾಜಕಾರಣದಿಂದ ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸ್ ಹಾಕುತ್ತಿದೆ..

ಸಿಎಂ ಸಿದ್ದರಾಮಯ್ಯ..

ಕೇಂದ್ರದ ಬಿಜೆಪಿ ಅಧಿಕಾರದಲ್ಲಿ ದೇಶದ ಸಾಲ 148 ಲಕ್ಷ ಕೋಟಿ ಹೆಚ್ಚಾಗಿದೆ..

ಡಿಸಿಎಂ ಡಿಕೆ ಶಿವಕುಮಾರ್..

ಬೆಳಗಾವಿ : ಬಿಜೆಪಿಯು ದ್ವೇಷ ರಾಜಕಾರಣದಲ್ಲಿ ತೊಡಗಿದ್ದು, ಕಾಂಗ್ರೆಸ್ ನಾಯಕರ ಮೇಲೆ ಸುಳ್ಳು ಕೇಸುಗಳನ್ನು ಹಾಕಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿಯ ಈ ಕುತಂತ್ರಕ್ಕೆ ಉತ್ತರವಾಗಿ ನ್ಯಾಯಾಲಯದಲ್ಲಿ ನ್ಯಾಯ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಬುಧವಾರ ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವುದನ್ನು ಖಂಡಿಸಿ, ಈ ಪ್ರಕರಣದಲ್ಲಿ ED ಸಲ್ಲಿಸಿದ ಆರೋಪ ಪಟ್ಟಿಯನ್ನು ಸಾರಾಸಗಟಾಗಿ ತಿರಸ್ಕರಿಸಿದ ವಿಚಾರಣಾ ನ್ಯಾಯಾಲಯದ (ಟ್ರಯಲ್ ಕೋರ್ಟ್) ತೀರ್ಮಾನವನ್ನು ಬೆಂಬಲಿಸಿ, ಎಂಎಲ್ ಎ ಹಾಗೂ ಎಂಎಲ್ ಸಿ ಗಳೊಂದಿಗೆ ಬೆಳಗಾವಿ ಸುವರ್ಣ ಸೌಧದ ಆವರಣದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.

ಬಿಜೆಪಿಯವರ ದ್ವೇಷದ ರಾಜಕಾರಣ, ಕೇಂದ್ರ ಅಥವಾ ರಾಜ್ಯಗಳಾಗಲಿ, ಬಿಜೆಪಿ ಅಧಿಕಾರದಲ್ಲಿರುವ ಕಡೆಗಳೆಲ್ಲಾ ಕಾಂಗ್ರೆಸ್ ನವರನ್ನು ಗುರಿಯಾಗಿಸಿ, ಅವರನ್ನು ಅಪರಾಧಿಗಳಾಗಿ ಬಿಂಬಿಸಿ, ನ್ಯಾಯಾಲಯಕ್ಕೆ ಎಡತಾಕುವಂತೆ ಮಾಡುತ್ತಿದ್ದಾರೆ. ಇಂತಹ ಅಸತ್ಯವಾದ ವಿಚಾರವನ್ನು ಮುಖ್ಯವಾಹಿನಿಗೆ ತಂದು ಬಿಜೆಪಿಯು ದುರುದ್ದೇಶದಲ್ಲಿ ತೊಡಗಿದ್ದಾರೆ. ಬಿಜೆಪಿಯವರು ತಮ್ಮ ತಪ್ಪುಗಳನ್ನು ಮರೆಮಾಚಲು ಇಂತಹ ದುಷ್ಕೃತ್ಯಕ್ಕೆ ಕೈಹಾಕಿದ್ದಾರೆ.

ಇಂದು ದೇಶದಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿದೆ. ದೇಶದಲ್ಲಿ ಹಣದುಬ್ಬರ ಹೆಚ್ಚಿದ್ದು ನಿರುದ್ಯೋಗದ ಪ್ರಮಾಣ ಏರಿಕೆಯಾಗಿದೆ. ಜನರ ಮೇಲೆ ತೆರಿಗೆಗಳನ್ನು ಮನಬಂದಂತೆ ಹೇರಿ, ಭಾರತವನ್ನು ಸಾಲಗಾರ ದೇಶವನ್ನಾಗಿ ಮಾಡಲಾಗುತ್ತಿದೆ ಎಂದರು.

ಡಿಸಿಎಂ ಡಿ.ಕೆ.ಶಿವಕುಮಾರ ಮಾತನಾಡಿ, ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ದೇಶದ ಸಾಲ ಸುಮಾರು 53.11 ಲಕ್ಷ ಕೋಟಿ ಆಗಿತ್ತು. ಆದರೆ ಮೋದಿಯವರು ಅಧಿಕಾರಕ್ಕೆ ಬಂದ ನಂತರ ಸಾಲದ ಮೊತ್ತ ಸುಮಾರು 2 ಲಕ್ಷ ಕೋಟಿಯನ್ನೂ ಮೀರಿದೆ. ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದು 11 ವರ್ಷಗಳಲ್ಲಿ ಈ ಸಾಲದ ಮೊತ್ತವು 148 ಲಕ್ಷ ಕೋಟಿ ಹೆಚ್ಚಾಗಿದೆ. ಬಿಜೆಪಿಯವರು ತಮ್ಮ ಈ ತಪ್ಪನ್ನು ಮರೆಮಾಚಲು ಇಂತಹ ಸುಳ್ಳು ಪ್ರಕರಣಗಳ ಮೊರೆಹೋಗುತ್ತಿದೆ ಎಂದರು.

Leave a Reply

Your email address will not be published. Required fields are marked *