ಶಿಂದೊಳ್ಳಿ ಗ್ರಾಮದಲ್ಲಿ ಪಲ್ಸ್ ಪೋಲಿಯೋ ಅಭಿಯಾನ..
ಅಭಿಯಾನಕ್ಕೆ ಚಾಲನೆ ನೀಡಿದ ಗ್ರಾಮ ಪಂಚಾಯತಿ ಸದಸ್ಯ ವೀರಭದ್ರಯ್ಯ ಪೂಜಾರಿ..
ಬೆಳಗಾವಿ : ಭಾನುವಾರ ದಿನಾಂಕ 21/12/2025 ರಂದು ರಾಜ್ಯಾದ್ಯಂತ ಪಲ್ಸ್ ಪೋಲಿಯೋ ಲಸಿಕಾ ಅಭಿಯಾನ ಪ್ರಾರಂಭವಾಗಿದ್ದು, ಬೆಳಗಾವಿ ತಾಲೂಕಿನ ಶಿಂದೊಳ್ಳಿ ಗ್ರಾಮದ ಪ್ರಾಥಮಿಕ ಆರೋಗ್ಯ ಉಪ ಕೇಂದ್ರದಲ್ಲಿ, ಗ್ರಾಮ ಪಂಚಾಯತಿ ಸದಸ್ಯರಾದ ವೀರಭದ್ರಯ್ಯ ಬಾಬು ಪೂಜಾರ ಅವರು ಪಲ್ಸ್ ಪೋಲಿಯೋ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ.
5 ವರ್ಷದ ಒಳಗಿನ ಎಲ್ಲಾ ಮಕ್ಕಳಿಗೆ ಪಲ್ಸ್ ಪೋಲಿಯೋ ಹನಿ ಹಾಕಿಸಿ ಅಂಗವಿಕಲತೆಯಿಂದ ನಿಮ್ಮ ಮಕ್ಕಳನ್ನು ರಕ್ಷಿಸಿ ಎಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಪಲ್ಸ್ ಪೋಲಿಯೋ ಲಸಿಕೆ ಹಾಕುವದು ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗಳ ಮಹತ್ವದ ಯೋಜನೆಯಗಿದ್ದು, ಐದು ವರ್ಷದ ಒಳಗಿನ ಪ್ರತಿ ಮಗುವಿಗೆ ಎರಡು ಹನಿ ಪೋಲಿಯೋ ಲಸಿಕೆ ಹಾಕಿಸುವದು ಆ ಮೂಲಕ ಪೋಲಿಯೋ ವಿರುದ್ದ ನಿರಂತರ ಗೆಲುವು ಸಾಧಿಸುವದು ಇದರ ಮುಖ್ಯ ಉದ್ದೇಶವಾಗಿದೆ.
ಭಾರತವನ್ನು ಪೋಲಿಯೋ ಮುಕ್ತ ದೇಶವನ್ನಾಗಿ ಮಾಡುವದು, ಭವಿಷ್ಯದಲ್ಲಿ ಈ ಸಮಸ್ಯೆ ನಮ್ಮ ದೇಶಕ್ಕೆ ಯಾವತ್ತೂ ಬರಬಾರದೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ದೇಶದಲ್ಲಿರುವ ಐದು ವರ್ಷದ ಒಳಗಿನ ಪ್ರತಿ ಮಗುವಿಗೂ, ಪ್ರತಿ ಬಾರಿಯೂ ಎರಡು ಹನಿ ಪೋಲಿಯೋ ಲಸಿಕೆಯನ್ನು ಹಾಕಿಸಿ, ತಮ್ಮ ಮಗುವಿನ ಸಂಪೂರ್ಣ ರಕ್ಷಣೆಯನ್ನು ಖಚಿತಪಡಿಸಿಕೊಳ್ಳಿ, ಪೋಲಿಯೋ ವಿರುದ್ಧ ದೇಶ ಸಾಧಿಸಿರುವ ಗೆಲುವನ್ನು ಮುಂದುವರೆಸಲು ಸರ್ಕಾರದೊಂದಿಗೆ ಕೈಜೋಡಿಸಿ ಎಂಬ ಸಂದೇಶದ ಮೂಲಕ ಇಂದು ಈ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ ಯಶಸ್ವಿಯಾಗಿ ನಡೆಯುತ್ತಿದೆ..
ವರದಿ ಬಿ ಕೆ ಪ್ರಕಾಶ..