ಕನ್ನಡ ಕಾರ್ಯಕ್ರಮಗಳ 50 ಲಕ್ಷ ಅನುದಾನದ ಸದ್ಬಳಕೆಗೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ..

ಕನ್ನಡ ಕಾರ್ಯಕ್ರಮಗಳ 50 ಲಕ್ಷ ಅನುದಾನದ ಸದ್ಬಳಕೆಗೆ ಜಿಲ್ಲಾಧಿಕಾರಿಗಳೊಂದಿಗೆ ಸಭೆ..

ಬೆಳಗಾವಿ ಉತ್ತರ ಹಾಗೂ ದಕ್ಷಿಣದಲ್ಲಿ ಕಾರ್ಯಕ್ರಮ ಆಯೋಜನೆಯ ಭರವಸೆ..

ಬೆಳಗಾವಿ : ಬುಧವಾರ ದಿನಾಂಕ 14/01/2026 ರಂದು ಮಧ್ಯಾಹ್ನ ಬೆಳಗಾವಿ ಜಿಲ್ಲಾಧಿಕಾರಿಗಳಾದ ಮೊಹಮ್ಮದ್ ರೋಶನ್ ಅವರನ್ನು ಕನ್ನಡ ಸಂಘಟನೆಗಳ ಮುಖಂಡರು ಭೇಟಿಯಾಗಿ ಬೆಳಗಾವಿಯ ಕನ್ನಡ ರಾಜ್ಯೋತ್ಸವಕ್ಕೆ ಸರ್ಕಾರದಿಂದ ಬಿಡುಗಡೆಯಾದ 50 ಲಕ್ಷ ರೂಪಾಯಿಗಳ ಅನುದಾನವನ್ನು ಸರಿಯಾಗಿ ಬಳಕೆ ಮಾಡುವ ಕುರಿತು ಚರ್ಚೆ ಮಾಡಲಾಯಿತು.

ಇದೇ ವಿಷಯದ ಕುರಿತಾಗಿ ಈ ಹಿಂದೆ ಬೆಳಗಾವಿ ಮಹಾನಗರ ಪಾಲಿಕೆಯ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕೈಗೊಂಡ ನಿರ್ಣಯದ ಅನುಸಾರವಾಗಿ ಮೂರು ಕಡೆಗಳಲ್ಲಿ ನಡೆಸುವ ಕಾರ್ಯಕ್ರಮಗಳ ಬದಲಾಗಿ ಅನುದಾನದ ಲಭ್ಯತೆಯ ಅನುಗುಣವಾಗಿ ಬೆಳಗಾವಿಯ ಉತ್ತರ ಮತಕ್ಷೆತ್ರದ ನೆಹರು ಕ್ರೀಡಾಂಗಣ ಮತ್ತು ಬೆಳಗಾವಿ ದಕ್ಷಿಣ ಮತಕ್ಷೇತ್ರದಲ್ಲಿ ಒಂದು ಕಡೆ ಕಾರ್ಯಕ್ರಮ ಮಾಡವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿ ಆದಷ್ಟೂ ಶೀಘ್ರದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಕಿತ್ತೂರು ಕರ್ನಾಟಕ ಸೇನೆಯ ರಾಜ್ಯಾಧ್ಯಕ್ಷರಾದ ಮಹಾದೇವ ತಳವಾರ, ಗಡಿನಾಡು ಕನ್ನಡಿಗರ ಸೇನೆಯ ರಾಜ್ಯಾಧ್ಯಕ್ಷರಾದ ಬಲರಾಮ ಮಾಸೇನಟ್ಟಿ, ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ವಾಜೀದ ಹಿರೇಕುಡಿ, ಸರ್ವೋದಯ ಸೇವಾ ಸಂಘದ ಅಧ್ಯಕ್ಷರಾದ ಶ್ರೀನಿವಾಸ ತಾಳೂಕರ ಸೇರಿದಂತೆ ಇತರರು ಭಾಗವಹಿಸಿದ್ದರು.