ಬಿ ಎಸ್ ಯಡಿಯೂರಪ್ಪ ಅವರ ರಾಜಕೀಯ ಜೀವನದ ಸುವರ್ಣ ಸಂಭ್ರಮ..
ಮೇ 9ರಂದು ಬಿಎಸ್ ವೈ ಅಭಿಮಾನೋತ್ಸವ ಸಮಾರಂಭ..
ಬೆಳಗಾವಿ : ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ರಾಜಕೀಯ ಜೀವನಕ್ಕೆ ಪಾದಾರ್ಪಣೆ ಮಾಡಿ 50 ವರ್ಷಗಳಾದ ಪ್ರಯುಕ್ತ ಇದೇ ಮೇ 9 ರಂದು ಚಿತ್ರದುರ್ಗದಲ್ಲಿ ಹಮ್ಮಿಕೊಂಡಿರುವ ‘ಬಿ.ಎಸ್.ವೈ.ಅಭಿಮಾನೋತ್ಸವ’ ಕಾರ್ಯಕ್ರಮದ ಪೂರ್ವಭಾವಿ ಸಭೆ ಬೆಳಗಾವಿ ಗೋಮಟೇಶ ವಿದ್ಯಾಪೀಠದಲ್ಲಿ ಜರುಗಿತು.
ಬಿಜೆಪಿ ಪಕ್ಷದ ಜಿಲ್ಲಾ ಮುಖಂಡರು ‘ಬಿ.ಎಸ್.ವೈ.ಅಭಿಮಾನೋತ್ಸವ’ ಕಾರ್ಯಕ್ರಮದ ಪೋಸ್ಟರ್ ಬಿಡುಗಡೆಗೊಳಿಸಿದರು.
ನಂತರ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ ಪಾಟೀಲ ಅವರು ಮಾತನಾಡಿ ಯಡಿಯೂರಪ್ಪ ಅವರ ಸುದೀರ್ಘ ರಾಜಕೀಯ ಹೋರಾಟವನ್ನು ಮೆಲುಕು ಹಾಕುವುದು ಮತ್ತು ರಾಜ್ಯ ಬಿಜೆಪಿಗೆ ಹೊಸ ಶಕ್ತಿ ತುಂಬುವುದು ಈ ಸಮಾವೇಶದ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು..
ವಿಭಾಗ ಪ್ರಭಾರಿ ಸಂಜಯ್ ಪಾಟೀಲ ಹಾಗೂ ಶಾಸಕ ವಿಠ್ಠಲ ಹಲಗೇಕರ ಮಾತನಾಡಿ ಇದು ಪಕ್ಷಾತೀತ ಕಾರ್ಯಕ್ರಮ ಇದು ಕೇವಲ ಒಂದು ಪಕ್ಷಕ್ಕೆ ಸೀಮಿತವಾಗದೇ ಎಲ್ಲಾ ವರ್ಗದ ಜನರು ಮತ್ತು ಮಠಾಧೀಶರನ್ನು ಒಳಗೊಂಡ ಐತಿಹಾಸಿಕ ಕಾರ್ಯಕ್ರಮವಾಗಲಿದೆ ಎಂದು ಹೇಳಿದರು, ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಮಹಾಂತೇಶ ದೊಡ್ಡಗೌಡ್ರ, ಅರವಿಂದ ಪಾಟೀಲ, ಜಿಲ್ಲಾ ಪ್ರದಾನ ಕಾರ್ಯದರ್ಶಿಗಳಾದ ಸಂದೀಪ ದೇಶಪಾಂಡೆ, ಮಲ್ಲಿಕಾರ್ಜುನ ಮಾದಮ್ಮನವರ, ಪ್ರಕೋಷ್ಠಗಳ ಜಿಲ್ಲಾ ಸಂಯೋಜಕ ಮಹೇಶ ಮೋಹಿತೆ ಹಾಗೂ ಪ್ರಮುಖ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು..
ವರದಿ ಪ್ರಕಾಶ ಬಿ ಕೆ..