ಶಿವಾನಂದ ನೀಲಣ್ಣವರ ಬಂಧನ…
ಬೆಳಗಾವಿ : ಶಿವಂ ಅಸೋಸಿಯೇಟ್ಸ್ ರಿಜಿಸ್ಟರ್ ಇಲ್ಲದ ಸಂಸ್ಥೆಯ ಮಾಲೀಕ ಸಾವಿರಾರು ಕೋಟಿ ಹೂಡಿಕೆ ವಂಚನೆ ಮಾಡಿದ್ದಾನೆಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಸಾರ್ವಜನಿಕರಿಗೆ ಹೆಚ್ಚಿನ ಬಡ್ಡಿ ನೀಡುವುದಾಗಿ ನಂಬಿಸಿ ಕೋಟ್ಯಾಂತರ ರೂಪಾಯಿ ಹಣ ಸಂಗ್ರಹಿಸಿರುವ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ನಿನ್ನೆ ಶಿವಂ ಅಸೋಸಿಯೇಟ್ ಕಚೇರಿ ಮೇಲೆ ಉಪ ವಿಭಾಗಾಧಿಕಾರಿ ಹಾಗೂ ಸಹಕಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದ ಅಧಿಕಾರಿಗಳು ಇಂದು ಮತ್ತೆ ಕಾರ್ಯಾಚರಣೆ ಮುಂದುವರಿಸಿದರು.
ಇಂದು ಮೂರು ಕಚೇರಿ ಹಾಗೂ ಒಂದು ಪ್ಲ್ಯಾಟ್ ಅನ್ನು ಅಧಿಕಾರಿಗಳು ಸೀಜ್ ಮಾಡಿದ್ದರು. ಪ್ರಸ್ತುತ ಶಿವಾನಂದ ನೀಲಣ್ಣವರ್ ತಮ್ಮ ಮನೆಯಲ್ಲಿ ಇದ್ದುದರಿಂದ ಈಗ ಆತನನ್ನು ಮಾಳ ಮಾರುತಿ ಪೊಲೀಸರು ಬಂಧನ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.