ರಾಜ್ಯ ಸರ್ಕಾರದ ರೈತ ವಿರೋಧಿ ನೀತಿಯ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ..
ಬೆಳಗಾವಿ : ರಾಜ್ಯ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಯನ್ನು ಖಂಡಿಸಿ ಮತ್ತು ಬೆಳಗಾವಿ ಜಿಲ್ಲೆಯನ್ನು ಬರ ಪೀಡಿತ ಜಿಲ್ಲೆಯೆಂದು ಘೋಷಿಸಲು ಆಗ್ರಹಿಸಿ ಬಿಜೆಪಿ ವತಿಯಿಂದ ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಯಿತು.
ನಗರದ ರಾಣಿ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ಪಾದಯಾತ್ರೆ ಮೂಲಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದ ಬಿಜೆಪಿಯ ಪ್ರಮುಖರು ಹಾಗೂ ಕಾರ್ಯಕರ್ತರು, ಈ ಸಂದರ್ಭದಲ್ಲಿ ಬಿಜೆಪಿಯ ಗ್ರಾಮೀಣ ಜಿಲ್ಲಾಧ್ಯಕ್ಷರಾದ ಸುಭಾಷ್ ಪಾಟೀಲ ಮಾತನಾಡಿದರು ಮತ್ತು ಮಾಜಿ ಶಾಸಕರಾದ ಸಂಜಯ ಪಾಟೀಲ, ಮಹಾಂತೇಶ ದೊಡ್ಡಗೌಡ್ರ ಮಾತನಾಡಿದರು.

ಪ್ರತಿಭಟನಾಕಾರರು ರಾಜ್ಯ ಸರ್ಕಾರದ ರೈತ ವಿರೋಧಿ ನೀತಿ ಘೋಷಣೆಯುಳ್ಳ ಬಿತ್ತಿ ಚಿತ್ರಗಳನ್ನು ಪ್ರದರ್ಶಿಸಿದರು, ಈ ಸಂದರ್ಭದಲ್ಲಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಜಗದೀಶ್ ಬೂದಿಹಾಳ, ಶಾಸಕ ವಿಠ್ಠಲ ಹಲಗೇಕರ, ಮಾಜಿ ವಿಧಾನ ಪರಿಷತ್ ಸದಸ್ಯರಾದ ಮಹಾಂತೇಶ ಕವಟಗಿಮಠ ಮಾಜಿ ಶಾಸಕರಾದ ಅರವಿಂದ್ ಪಾಟೀಲ, ಪ್ರಮುಖರಾದ ಕಲ್ಲಪ್ಪ ಶಹಾಪೂರಕರ, ಈರಣ್ಣ ವಾರದ, ಶಂಕರ ಹುರಕಡ್ಲಿ, ಸಂದೀಪ ದೇಶಪಾಂಡೆ, ಮಲ್ಲಿಕಾರ್ಜುನ ಮಾದಮ್ಮನವರ, ಈರಯ್ಯ ಖೋತ, ರಾಜಶೇಖರ ಡೋಣಿ, ರೈತರು, ಪ್ರಮುಖ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.