ಉಸುಕಿನ ಪ್ಯಾಕ್ಟರಿಗಳಿಂದ ಜನಜೀವನದ ಮೇಲೆ ದುಸ್ಪರಿಣಾಮ..

ಉಸುಕಿನ ಪ್ಯಾಕ್ಟರಿಗಳಿಂದ ಜನಜೀವನದ ಮೇಲೆ ದುಸ್ಪರಿಣಾಮ..

ದೂಳು ಮಾಲಿನ್ಯ ತಡೆಗೆ ಆಗ್ರಹಿಸಿ ಮಾಲಿನ್ಯ ನಿಯಂತ್ರಣ ಮಂಡಳಿಗೆ ಕರವೇ ಮನವಿ..

ಬೆಳಗಾವಿ : ಬೆಳಗಾವಿ ಜಿಲ್ಲೆಯ ಗಡಿ ತಾಲೂಕಿನ ಗಡಿಭಾಗದ ರಾಜಗೋಳಿ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ದುರ್ಗಾ ಎಂಟರ್ಪ್ರೈಸಸ್ ಹಾಗೂ ಪಾಟೀಲ್ಸ್ ಸ್ಯಾಂಡ್ ಉಸುಕಿನ ಫ್ಯಾಕ್ಟರಿಗಳಿಂದ ಅತಿಯಾದ ಪ್ರಮಾಣದಲ್ಲಿ ದೂಳು ಹೊರಸೂಸಲಾಗುತ್ತಿದ್ದು, ಪರಿಸರ ಹಾಗೂ ಸಾರ್ವಜನಿಕರ ಆರೋಗ್ಯದ ಮೇಲೆ ಗಂಭೀರ ದುಷ್ಪರಿಣಾಮ ಉಂಟಾಗುತ್ತಿದೆ ಎಂದು ಆರೋಪಿಸಿ ಸೋಮವಾರ ಕರುನಾಡ ರಕ್ಷಣಾ ವೇದಿಕೆ ಹಾಗೂ ನಿಂಗ್ಯಾನಟ್ಟಿ ಗ್ರಾಮದ ಗ್ರಾಮಸ್ಥರು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಬೆಳಗಾವಿ ಪ್ರಾದೇಶಿಕ ಕಚೇರಿಗೆ ಮನವಿ ಸಲ್ಲಿಸಿದರು.

ಕರ್ನಾಟಕ–ಮಹಾರಾಷ್ಟ್ರ ಗಡಿಭಾಗದ ನಿಂಗ್ಯಾನಟ್ಟಿ ಹಾಗೂ ರಾಜಗೋಳಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ದಿನದಿಂದ ದಿನಕ್ಕೆ ದೂಳಿನ ಪ್ರಮಾಣ ಹೆಚ್ಚುತ್ತಿದ್ದು, ಇದರಿಂದ ಸ್ಥಳೀಯರಲ್ಲಿ ಉಸಿರಾಟದ ತೊಂದರೆ, ಕಣ್ಣು ಉರಿ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ ಎಂದು ಗ್ರಾಮಸ್ಥರು ಹಾಗೂ ಕರವೇ ಕಾರ್ಯಕರ್ತರು ಮಾಲಿನ್ಯ ನಿಯಂತ್ರಣ ಇಲಾಖೆಯ ಕಛೇರಿ ಎಂದರು ಪ್ರತಿಭಟನೆಯಲ್ಲಿ ಅಸಮಾಧಾನ ಹೋರ ಹಾಕಿ, ಕೃಷಿ ಭೂಮಿಗಳ ಮೇಲೆ ದೂಳಿನ ಪದರ ಆವರಿಸುತ್ತಿದ್ದು, ಬೆಳೆಗಳಿಗೆ ಅಪಾರ ಹಾನಿಯಾಗುತ್ತಿದೆ ಎಂದು ಆರೋಪಿಸಿದರು.

ಈ ವೇಳೆ ಕರುನಾಡು ರಕ್ಷಣಾ ವೇಧಿಕೆಯ ರೈತ ಘಟಕದ ರಾಜ್ಯಾಧ್ಯಕ್ಷ ಸತೀಶ್‌ ನಾಯಕ ಮಾತನಾಡಿ, ಫ್ಯಾಕ್ಟರಿಗಳಿಂದ ಹೊರಬರುತ್ತಿರುವ ದೂಳು ಸಾರ್ವಜನಿಕರ ಆರೋಗ್ಯಕ್ಕೆ ಅಪಾಯಕಾರಿಯಾಗಿದ್ದು, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯj ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮಾಲಿನ್ಯ ನಿಯಂತ್ರಣ ಅಧಿಕಾರಿಗಳಿಗೆ ಮನವಿ ಸಲ್ಲಿಸುವ ವೇಳೆ ಆಗ್ರಹಿಸಿದರು.

ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಉಲ್ಲಂಘಿಸಿರುವುದು ಕಂಡುಬಂದಲ್ಲಿ ಸಂಬಂಧಿಸಿದ ಸಂಸ್ಥೆಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಕರುನಾಡ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮಲ್ಲಪ್ಪ ಗುಡಗೇನಟ್ಟಿ, ಕುರಿಹಾಳ, ನಿಂಗ್ಯಾನಟ್ಟಿ ಗ್ರಾಮಸ್ಥರು ಸೇರಿದಂತೆ ಕರವೇ ಕಾರ್ಯಕರ್ತರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *