ಸಚಿವ ಸತೀಶ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ..

ಸಚಿವ ಸತೀಶ ಜಾರಕಿಹೊಳಿ ಮನೆ ಮೇಲೆ ಇಡಿ ದಾಳಿ..

ಬೆಂಗಳೂರು : ಲೋಕೋಪಯೋಗಿ ಇಲಾಖೆ, ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಮನೆಯ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಧಿಡೀರ್‌ ದಾಳಿಯೆಸಗಿದ್ದಾರೆ. ಬುಧವಾರ ಬೆಂಗಳೂರಿನ ಡಾಲರ್ಸ್‌ ಕಾಲನಿಯಲ್ಲಿರುವ ನಿವಾಸದ ಮೇಲೆ ಬೆಳ್ಳಂಬೆಳಗ್ಗೆಯೇ ದಾಳಿ ನಡೆಸಲಾಗಿದೆ.

ಎರಡು ಕಾರ್‌ ಗಳಲ್ಲಿ ಬಂದಿರುವ ಜಾರಿ ನಿರ್ದೇಶಾನಲಯದ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ,
ಅಬಕಾರಿ ಇಲಾಖೆಯ ಹಲವು ಅಧಿಕಾರಿಗಳ ಮನೆಯ ಮೇಲೆ ದಾಳಿ ನಡೆದ ಬೆನ್ನಲ್ಲೇ ಸತೀಶ್ ಜಾರಕಿಹೊಳಿಯವರ ಮನೆಯ ಮೇಲೆ‌ ಜಾರಿ ನಿರ್ದೇಶನಾಲಯದ ದಾಳಿ ನಡೆದಿದೆ. ದಾಳಿಗೆ ನಿಖರವಾದ ಕಾರಣ ಇದುವರೆಗೂ ತಿಳಿದುಬಂದಿಲ್ಲ .ಈ ಬಗ್ಗೆ ಸಚಿವರಾಗಲೀ, ಅಧಿಕಾರಿಗಳಾಗಲೀ ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಕೆಲವು ದಿನಗಳ ಹಿಂದಷ್ಟೇ ಅಬಕಾರಿ ಆಯುಕ್ತರು ಹಾಗೂ ಸಚಿವ ಸತೀಶ್‌ ಜಾರಕಿಹೊಳಿ ಬಂಧುಗಳೂ ಆಗಿದ್ದ ವೈ. ಮಂಜುನಾಥ್‌ ಮನೆಯ ಮೇಲೆ ಇ.ಡಿ. ದಾಳಿ ನಡೆಸಿತ್ತು. ಆ ದಾಳಿಯ ವೇಳೆ ಸಿಕ್ಕಿದ ದಾಖಲೆಗಳ ಮಾಹಿತಿಯ ಮೇರೆಗೆ ಇಂದು ಪ್ರತ್ಯೇಕ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.