ಇಡಿ ದಾಳಿ ಬಳಿಕ ಕೆಡಿಪಿ ಸಭೆಗೆ ಕ್ಯಾಪ್ಟರನಲ್ಲಿ ಎಂಟ್ರಿ ಕೊಟ್ಟ ಸತೀಶ ಸಾಹುಕಾರ…
ಬೆಳಗಾವಿ : ಸುವರ್ಣಸೌಧದಲ್ಲಿ ಇಂದು ನಡೆದಿರುವ ಕೆಡಿಪಿ ಸಭೆಗೆ ಹಾಜರಾಗಲು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಗೋಕಾಕದಿಂದ ಹೆಲಿಕಾಪ್ಟರ್ ಮೂಲಕ ಬೆಳಗಾವಿ ಸುವರ್ಣಸೌಧಕ್ಕೆ ಆಗಮಿಸಿದರು.
ಗೋಕಾಕದಿಂದ ಬೆಳಗಾವಿಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಸಚಿವರ ಜೊತೆ ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಹಾಗೂ ಸಚಿವರ ಆಪ್ತ ಸಹಾಯಕ ಬಸವರಾಜ ಜತ್ತಿ ಇದ್ದರು. ಹೆಲಿಕಾಪ್ಟರ್ ಮೂಲಕ ಸುವರ್ಣಸೌಧಕ್ಕೆ ಬಂದಿಳಿದ ಸಚಿವರಿಗೆ ಬೆಳಗಾವಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಪ್ರಕಾಶ್ ನಿಕಂ, ಜಿಪಂ ಸಿಇಒ ರಾಹುಲ್ ಶಿಂಧೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮರಾಜನ್ ಕೆ. ಸೇರಿದಂತೆ ಹಿರಿಯ ಅಧಿಕಾರಿಗಳು ಹೂಗುಚ್ಛ ನೀಡಿ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ, ಶಾಸಕ ಆಸಿಫ್ ಸೇಠ್, ವಿಶ್ವಾಸ ವೈಧ್ಯ ಸೇರಿದಂತೆ ಹಲವು ಮುಖಂಡರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ಇಂದು ಸುವರ್ಣಸೌಧದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಜಿಲ್ಲೆಯ ವಿವಿಧ ಅಭಿವೃದ್ಧಿ ಕಾಮಗಾರಿಗಳು, ಯೋಜನೆಗಳ ಪ್ರಗತಿ ಹಾಗೂ ಆಡಳಿತಾತ್ಮಕ ವಿಷಯಗಳ ಕುರಿತು ಚರ್ಚೆ ನಡೆದಿದ್ದು, ಬರುವ ದಿನಗಳಲ್ಲಿ ಜಿಲ್ಲೆಯಲ್ಲಿ ಮತ್ತಷ್ಟು ಅಭಿವೃದ್ದಿಪರ ಕಾರ್ಯ ಕೈಗೊಳ್ಳಲು ಸಚಿವರು ಸೂಚನೆ ನೀಡಿದ್ದಾರೆ.